ವಾಷಿಂಗ್ಟನ್: ಭಾರತದ ಮೇಲೆ 50% ಸುಂಕ ವಿಧಿಸಿದ್ದು, ರಷ್ಯಾಗೆ ದೊಡ್ಡ ಹೊಡೆತ ಕೊಟ್ಟಿದೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಉಕ್ರೇನ್ ಮೇಲೆ ಯುದ್ಧ ನಡೆಸುತ್ತಿರುವ ರಷ್ಯಾದಿಂದ ಭಾರತ ತೈಲ ಖರೀದಿಸುತ್ತಿದೆ.
ಹೀಗಾಗಿ, ಭಾರತದ ಮೇಲೆ ಅಮೆರಿಕ ಭಾರಿ ಸುಂಕ ವಿಧಿಸಿದೆ. ಭಾರತ ಸೇರಿದಂತೆ ಹಲವಾರು ದೇಶಗಳ ಮೇಲೆ ಅಮೆರಿಕದ ಸುಂಕ ಹೇರಿಕೆಯಿಂದಾಗಿ ರಷ್ಯಾದ ಆರ್ಥಿಕತೆಯು ತೀವ್ರವಾಗಿ ಅಸ್ತವ್ಯಸ್ತಗೊಂಡಿದೆ ಎಂದು ತಿಳಿಸಿದ್ದಾರೆ.
ರಷ್ಯಾ ಮತ್ತೆ ರೂಪುಗೊಳ್ಳಬೇಕು ಎಂದು ನಾನು ಭಾವಿಸುತ್ತೇನೆ. ಅದೊಂದು ಬೃಹತ್ ದೇಶ. ರಷ್ಯಾದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಲು ಪುಟಿನ್ ಅಪಾರ ಸಾಮರ್ಥ್ಯವನ್ನು ಹೊಂದಿದ್ದಾರೆ. ಆದರೆ, ಈಗ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಅವರ ಆರ್ಥಿಕತೆಯು ಈಗ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಇದರಿಂದ ತುಂಬಾ ತೊಂದರೆಗೀಡಾಗಿದೆ ಎಂದು ಮಾತನಾಡಿದ್ದಾರೆ.
ಬೇರೆ ಯಾರೂ ಇಷ್ಟೊಂದು ಕಠಿಣವಾಗಿರುತ್ತಿರಲಿಲ್ಲ. ನಾನು ಇಷ್ಟಕ್ಕೆ ನಿಲ್ಲುವುದಿಲ್ಲ ಎಂದು ಟ್ರಂಪ್ ಎಚ್ಚರಿಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ, ಭಾರತ ಮತ್ತು ರಷ್ಯಾದ ಆರ್ಥಿಕತೆಗಳು ಸತ್ತಿವೆ ಎಂದು ಟ್ರಂಪ್ ಹೇಳಿಕೆ ನೀಡಿದ್ದರು