ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಪ್ರತಿಭಟನೆ ನಡೆಸುತ್ತೇವೆ: ಡಿ.ಕೆ.ಶಿವಕುಮಾರ್

0
Spread the love

ಬೆಂಗಳೂರು: ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಪ್ರತಿಭಟನೆ ನಡೆಸುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯಿಂದ ಜನರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಜನಜಾಗೃತಿ ಮೂಡಿಸಿ ಹಾಗೂ ಸಂವಿಧಾನ ರಕ್ಷಣೆಗೆ ಬೆಳಗಾವಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

Advertisement

ಈ ಪ್ರತಿಭಟನೆಯಲ್ಲಿ ನಾನು, ಸಿಎಂ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಭಾಗವಹಿಸುತ್ತಿದ್ದೇವೆ. ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಈ ಹೋರಾಟ ಮಾಡಲಿದ್ದೇವೆ” ಎಂದರು.

“ಬಿಜೆಪಿಯವರು ಕೇಂದ್ರದಲ್ಲಿ ಇರುವ ಅವರದೇ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಬೇಕು. ಏಕೆಂದರೆ ಅವರಿಂದಲೇ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿರುವುದು. ನಾವು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಪ್ರತಿಭಟನೆ ನಡೆಸುತ್ತೇವೆ” ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here