ಬೆಳಗಾವಿ: ಸಿದ್ದರಾಮಯ್ಯ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಬರುತ್ತಿಲ್ಲ ಎಂದು ಗೃಹಲಕ್ಷ್ಮಿಯರು ಸರ್ಕಾರದ ವಿರುದ್ದ ಆಕ್ರೋಶ ಹೊರ ಹಾಕಿದ್ದರು. ಕಳೆದ ಮೂರು ತಿಂಗಳಿನಿಂದ ಹಣ ಹಾಕಿಲ್ಲ ಎನ್ನುವ ಆರೋಪಗ ಕೇಳಿಬಂದಿದ್ದು, ಇದೀಗ ಇನ್ನೂ 8 ದಿನಗಳಲ್ಲಿ ʻಗೃಹಲಕ್ಷ್ಮಿʼ ಯೋಜನೆ ಹಣ ಬಿಡುಗಡೆ ಮಾಡುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಅಪಪ್ರಚಾರ ಮಾಡಲಿ. ನಾವು ಈಗಾಗಲೇ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡುವುದಾಗಿ ಹೇಳಿದ್ದೇವೆ. ತಾಲೂಕು ಪಂಚಾಯಿತಿ ಮುಖಾಂತರ ಬಿಡುಗಡೆ ಮಾಡಬೇಕು ಅಂತ ಹೇಳಿರೋದ್ರಿಂದ ಸ್ವಲ್ಪ ತಡವಾಗಿದೆ.
ಯಾವುದೇ ಕಾರಣಕ್ಕೂ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ನಿಲ್ಲೋದಿಲ್ಲ. 8-10 ದಿನಗಳಲ್ಲಿ ಬರುತ್ತೆ ಅಂತ ಹೇಳಿದ್ದೆ. 2 ದಿನ ಕಳೆದಿದೆ. ಇನ್ನು 8 ದಿನಗಳಲ್ಲಿ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.