ಬೆಂಗಳೂರು: ರೈತರನ್ನು ಉಳಿಸುವ ಕೆಲಸ ಮಾಡುತ್ತೇವೆ. ರೈತರ ಆಸ್ತಿ ರೈತರದ್ದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರೈತರನ್ನು ಉಳಿಸುವ ಕೆಲಸ ಮಾಡುತ್ತೇವೆ. ರೈತರ ಆಸ್ತಿ ರೈತರದ್ದು. ಕಂದಾಯ ಇಲಾಖೆ, ತಹಶೀಲ್ದಾರರಿಗೆ ಸೂಚನೆ ನೀಡಲಾಗಿದೆ. ಯಾವ ರೈತರಿಗೆ ತೊಂದರೆ ಕೊಡುವುದಿಲ್ಲ. ಸರ್ಕಾರದ ನಿರ್ಧಾರ ಇದು. ಬಿಜೆಪಿ ಸುಮ್ಮನೆ ರಾಜಕೀಯ ಮಾಡುತ್ತಿದೆ. ರೈತರ ಜಮೀನು ರೈತರಿಗೆ ಇರಲಿದೆ ಎಂದು ಹೇಳಿದರು.
ಇನ್ನೂ ವಕ್ಫ್ ವಿಚಾರವಾಗಿ ಬಿಜೆಪಿಯಿಂದ ರಾಜ್ಯಾದ್ಯಂತ ಪ್ರತಿಭಟನೆ ಮಾಡುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಅವರು ಅನಗತ್ಯವಾಗಿ ರಾಜಕೀಯ ಮಾಡುತ್ತಿದ್ದಾರೆ. ಈಗಾಗಲೇ ಸಿಎಂ, ಕಂದಾಯ ಸಚಿವರು ಸ್ಪಷ್ಟನೆ ಕೊಟ್ಟಿದ್ದಾರೆ. ಹಿಂದೆ ಬಿಜೆಪಿ ಸರ್ಕಾರದಲ್ಲೂ ಆ ರೀತಿ ನೋಟಿಸ್ ಕೊಟ್ಟು ಮಾಡುತ್ತಿದ್ದರು. ಈಗಲೂ ಮಾಡುತ್ತಿದ್ದೇವೆ. ನಾವು ಈಗ ಎಚ್ಚೆತ್ತುಕೊಂಡು ರೈತರಿಗೆ ಕೊಟ್ಟ ಎಲ್ಲಾ ನೋಟಿಸ್ ವಾಪಸ್ ಪಡೆದಿದ್ದೇವೆ ಎಂದರು.