ಚಿತ್ರದುರ್ಗ: ಸಿರಿಗೆರೆ ಸಮೀಪದ ಹಳ್ಳದ ಬಳಿ ಅಪರಿಚಿತ ವ್ಯಕ್ತಿಗಳು ಕಾರ್ ನಿಲ್ಲಿಸಿ ನಂಬರ್ ಪ್ಲೇಟಿಗೆ ಕೆಸರು ಹಚ್ಚುತ್ತಿದ್ದನ್ನು ಕಂಡ ಗ್ರಾಮಸ್ಥರ ಜಾಗೃತೆಯಿಂದ, ಭಾರೀ ಅಪಾಯವೊಂದನ್ನು ತಪ್ಪಿಸಿದ್ದಾರೆ. ಹೌದು ಸ್ಥಳೀಯರು ತಕ್ಷಣವೇ ಸಿರಿಗೆರೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಂತೆಯೇ ಅಪರಿಚಿತ ವ್ಯಕ್ತಿಗಳು ಸ್ಥಳದಿಂದ ಪರಾರಿಯಾಗುತ್ತಿದ್ದರು, ಈ ವೇಳೆ ಗ್ರಾಮಸ್ಥರು ಮತ್ತು ಪೊಲೀಸರು ಸೇರಿ ಇಬ್ಬರನ್ನು ಕಾಡಿನಲ್ಲಿ ಸೆರೆಹಿಡಿದಿದ್ದಾರೆ.
ಶಂಕಿತರು ಕಾರಿನಲ್ಲಿ ಮಾರಕಾಸ್ತ್ರಗಳನ್ನು ಸಂಗ್ರಹಿಸಿಕೊಂಡು, ಸಿರಿಗೆರೆ ಮತ್ತು ಸುತ್ತಮುತ್ತಲಿನ ಅಡಿಕೆ ವ್ಯಾಪಾರಿಗಳನ್ನು ಟಾರ್ಗೆಟ್ ಮಾಡುವ ನಿಟ್ಟಿನಲ್ಲಿ ಸದ್ದಿಲ್ಲದೆ ತಯಾರಿ ನಡೆಸುತ್ತಿದ್ದರು ಎಂಬ ಅನುಮಾನ ವ್ಯಕ್ತವಾಗಿದ್ದು, ಘಟನಾ ಸ್ಥಳಕ್ಕೆ ಭರಮಸಾಗರ ಪೊಲೀಸರು ದೌಡಾಯಿಸಿದ್ದು, ಕಾರಿನಲ್ಲಿ ಪತ್ತೆಯಾದ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ.



