ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ತಾಲೂಕಿನ ಮಾಡಳ್ಳಿ ಗ್ರಾಮದ ಅಂಗನವಾಡಿ ಕೇಂದ್ರ–36ರಲ್ಲಿ ಪುಟಾಣಿ ಮಕ್ಕಳಿಗೆ ಅಕ್ಷರಾಭ್ಯಾಸ, ‘ವೆಲ್‌ಕಂ ಡೇ’ ಹಾಗೂ ಎಲ್‌ಕೆಜಿ–ಯುಕೆಜಿ ಪ್ರವೇಶೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ತಾಲೂಕಿನ ಮಾಡಳ್ಳಿ ಗ್ರಾಮದ ಅಂಗನವಾಡಿ ಕೇಂದ್ರ–36ರಲ್ಲಿ ಪುಟಾಣಿ ಮಕ್ಕಳಿಗೆ ಅಕ್ಷರಾಭ್ಯಾಸ, ‘ವೆಲ್‌ಕಂ ಡೇ’ ಹಾಗೂ ಎಲ್‌ಕೆಜಿ–ಯುಕೆಜಿ ಪ್ರವೇಶೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಹೊಸ ಬಟ್ಟೆ ತೊಟ್ಟು ಪೋಷಕರೊಂದಿಗೆ ಆಗಮಿಸಿದ ಮಕ್ಕಳನ್ನು ಆರತಿ ಬೆಳಗಿ, ಕಾಣಿಕೆ ನೀಡಿ ಸ್ವಾಗತಿಸಲಾಯಿತು. ಬಳಿಕ ಗಣೇಶ ಹಾಗೂ ಶಾರದಾ ಮಾತೆಯ ಪೂಜೆ ನೆರವೇರಿಸಿ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಲಾಯಿತು. ಎಲ್‌ಕೆಜಿ ಹಾಗೂ ಯುಕೆಜಿಗೆ ದಾಖಲಾದ ಮಕ್ಕಳಿಗೆ ಇದೇ ವೇಳೆ ಪಠ್ಯಪುಸ್ತಕಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಯೋಜನಾಧಿಕಾರಿ ಮೃತ್ಯುಂಜಯ ಜಿ., ಅಂಗನವಾಡಿಗಳಲ್ಲಿ ಎಲ್‌ಕೆಜಿ–ಯುಕೆಜಿ ಆರಂಭಿಸಿರುವುದರಿಂದ ಖಾಸಗಿ ಶಾಲೆಗಳ ಮಾದರಿಯಲ್ಲೇ ಗುಣಮಟ್ಟದ ಶಿಕ್ಷಣ, ಪೌಷ್ಟಿಕ ಆಹಾರ ಹಾಗೂ ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಅಗತ್ಯ ತರಬೇತಿ ನೀಡಲಾಗುತ್ತಿದೆ. ಪೋಷಕರು ಮಕ್ಕಳನ್ನು ಅಂಗನವಾಡಿಗೆ ದಾಖಲಿಸಿ ಸರ್ಕಾರದ ಯೋಜನೆಗಳ ಸದುಪಯೋಗ ಪಡೆಯಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಮೇಲ್ವಿಚಾರಕಿ ಶಿಲ್ಪಾ ಹೊಸಮಠ, ರಮಜಾನ್‌ಸಾಬ ನದಾಫ್, ದಾವಲಸಾಬ ನದಾಫ್, ನಿವೃತ್ತ ಶಿಕ್ಷಕ ಹನುಮಂತಪ್ಪ ಸರವಿ, ಅಂಗನವಾಡಿ ಕಾರ್ಯಕರ್ತೆ ಈರಮ್ಮ ಅಂಗಡಿ, ಸಹಾಯಕಿ ಸವಿತಾ ಸರವಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಬಳಿಕ ಮಕ್ಕಳಿಂದ ವಿವಿಧ ಆಟೋಟಗಳು ನಡೆಯಿತು.
“ಅಂಗನವಾಡಿಗಳಲ್ಲೂ ಖಾಸಗಿ ಶಾಲೆಗಳ ಮಾದರಿಯ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ.”
– ಮೃತ್ಯುಂಜಯ ಜಿ.



