ವಿಜಯಸಾಕ್ಷಿ ಸುದ್ದಿ, ಗದಗ : ಇಲ್ಲಿನ ಕನಕದಾಸ ಶಿಕ್ಷಣ ಸಂಸ್ಥೆಯ ಅಂಗ ಸಂಸ್ಥೆಯಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಸಾಧಿಸಿದ್ದಾರೆ.
Advertisement
ಪ್ರಥಮ ಪ್ರವೀಣ ಕುರಡಗಿ-ಶೇ.88.8, ದ್ವಿತೀಯ ಅಭಿಷೇಕ ಯಲಬುರ್ಗಿ-ಶೇ.80.4, ತೃತೀಯ ಜ್ಯೋತಿ ರಾಮಜಿ ಶೇ.79.4 ಅಂಕಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರಾದ ಡಾ. ಬಿ.ಎಫ್. ದಂಡಿನ, ಕಾರ್ಯದರ್ಶಿ ರವೀಂದ್ರನಾಥ ದಂಡಿನ, ಸಹ ಕಾರ್ಯದರ್ಶಿ ಪುನೀತಕುಮಾರ ಬೆನಕನವಾರಿ, ಪ್ರಾಚಾರ್ಯ ಸಿದ್ದು ಯಾಪಲಪರ್ವಿ, ಮುಖ್ಯೋಪಾಧ್ಯಾಯ ರಾಮಣ್ಣ ಪಿ.ಕುರಡಗಿ ಹಾಗೂ ಶಾಲೆಯ ಎಲ್ಲಾ ಶಿಕ್ಷಕರು ಅಭಿನಂದನೆ ಸಲ್ಲಿಸಿದ್ದಾರೆ.