ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಅಮಾನವೀಯ ಘಟನೆಯೊಂದು ಜರುಗಿದೆ.
ಕಿಡಿಗೇಡಿಗಳು ಮೂರು ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿದ್ದಾರೆ. ನಿನ್ನೆ (ಶನಿವಾರ) ರಾತ್ರಿ ರಸ್ತೆಯಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲನ್ನು ಕೊಯ್ದಿದ್ದು, ಈಗ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ನಡೆದ ಸ್ಥಳಕ್ಕೆ 20ಕ್ಕೂ ಹೆಚ್ಚು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಹಿಂದೂ ಸಂಘಟನೆಗಳ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿದ್ದಾರೆ. ಈ ಭಾಗದಲ್ಲಿ ಡ್ರಗ್ಸ್, ಗಾಂಜಾ ಸೇವನೆ ಹೆಚ್ಚಿದ್ದರೂ ಪೊಲೀಸರು ಇದಕ್ಕೆ ಕಡಿವಾಣ ಹಾಕುತ್ತಿಲ್ಲ ಎಂದು ದೂರಿದ್ದಾರೆ.
ಇನ್ನೂ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದ ಪಿಸಿ ಮೋಹನ್ ಸ್ಥಳಕ್ಕೆ ಆಗಮಿಸಿ ಪೊಲೀಸರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.



