ಬೆಂಗಳೂರು: ಹಿಂದೂಗಳು ಏನು ದ್ರೋಹ ಮಾಡಿದ್ದಾರೆ ಅಂತ ಮುಸಲ್ಮಾನರಿಗೆ 4% ಮೀಸಲಾತಿ ಕೊಟ್ಟಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹಿಂದೂಗಳು ಏನು ದ್ರೋಹ ಮಾಡಿದ್ದಾರೆ? ಅಂತ ಮುಸಲ್ಮಾನರಿಗೆ 4% ಮೀಸಲಾತಿ ಕೊಟ್ಟಿದ್ದಾರೆ.
Advertisement
ನಾವು ಮುಸ್ಲಿಮರ ವಿರೋಧಿಗಳಲ್ಲ, ಆದರೆ ಎಲ್ಲರನ್ನೂ ಸರಿ ಸಮನಾಗಿ ನೋಡಿಕೊಳ್ಳುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ಹೇಳಿದರು.
ಇನ್ನೂ ಹಾಲು, ವಿದ್ಯುತ್, ಮೆಟ್ರೋ, ನೋಂದಣಿ ವೆಚ್ಚ ಸೇರಿ ಎಲ್ಲಾ ದರ ಏರಿಕೆ ಮಾಡಿದ್ದಾರೆ. ದಿನಬಳಕೆಯ ವಸ್ತುಗಳನ್ನು ಕಾಂಗ್ರೆಸ್ ಸರ್ಕಾರ ಏರಿಸಿ ಜನರನ್ನು ನೆಮ್ಮದಿಯಿಂದ ಬದುಕಲು ಬಿಡುತ್ತಿಲ್ಲ, ಆದ್ದರಿಂದ ಬೆಲೆ ಏರಿಕೆ ಹಿಂಪಡೆಯಬೇಕು ಅಂತಾ ನಾವು ನಾಳೆ ಅಹೋ ರಾತ್ರಿ ಧರಣಿ ಮಾಡುತ್ತಿದ್ದೇವೆ. ನಾನೂ ಕೂಡಾ ಧರಣಿಯಲ್ಲಿ ಭಾಗವಹಿಸುತ್ತಿದ್ದೇನೆ ಎಂದರು.