ಬೆಳಗಾವಿ: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿ ಯೋಜನೆ ಜುಲೈ ಕಂತಿನ ಹಣ ಬಿಡುಗಡೆಯ ಪ್ರಕ್ರಿಯೆ ನಡೆಯುತ್ತಿದ್ದು, ಇದಾದ ಕೆಲ ದಿನಗಳಲ್ಲೇ ಆಗಸ್ಟ್ ತಿಂಗಳ ಹಣವೂ ಬಿಡುಗಡೆಯಾಗಲಿದೆ ಎಂದು ತಿಳಿಸಿದರು.
Advertisement
ಪಂಚಮಸಾಲಿ ಸಮುದಾಯಕ್ಕೆ ಮಾಜಿ ಸಚಿವ ಮುರುಗೇಶ್ ನಿರಾಣಿ ಅವರ ಕೊಡುಗೆ ಏನು ಎಂದು ಪ್ರಶ್ನಿಸಿದ ಹೆಬ್ಬಾಳ್ಕರ್, ನಾನು ಎಂದಿಗೂ ಪಂಚಮಸಾಲಿ ಮೀಸಲಾತಿ ಪರವಾಗಿದ್ದೇನೆ. 2ಎ ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಸದಾ ನನ್ನ ಬೆಂಬಲ ಇರುತ್ತದೆ ಎಂದರು.