ಬೆಂಗಳೂರು: ಬಡವರು, ಹೆಣ್ಣುಮಕ್ಕಳ ನೋವು ಕುಮಾರಸ್ವಾಮಿಗೆ ಗೊತ್ತಿಲ್ಲ. ಅವರು ಖುಷಿಯಿಂದ ಹಬ್ಬ ಆಚರಣೆ ಮಾಡುತ್ತಿದ್ದಾರೆ. ದಸರಾಗೆ ಬಂದಿದ್ದ ಜನರು ನೋಡಿದ್ರೆ ಗೊತ್ತಾಗುತ್ತೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಮೊದಲು ಡಿಸಿಎಂ ಅವರು ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳನ್ನು ಕೋರಿದರು. ಬಳಿಕ ಗ್ಯಾರಂಟಿ ಯೋಜನೆಗಳ ಬಗ್ಗೆ ಕುಮಾರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿದರು.
ಕುಮಾರಸ್ವಾಮಿಗೂ ಗ್ಯಾರಂಟಿಗಳಿಗೆ ಏನು ಸಂಬಂಧ..?. ನಮ್ಮ ಗ್ಯಾರಂಟಿ ಬಗ್ಗೆ ಕುಮಾರಸ್ವಾಮಿಗೆ ಏನು ಗೊತ್ತಿದೆ?. ಅವರೇನು ಫಲಾನುಭವಿನಾ..?. ಅವರ ಪಂಚರತ್ನ ಯೋಜನೆ ಇಂಪ್ಲಿಮೆಂಟ್ ಮಾಡಲು ಆಗಲಿಲ್ಲ. ಜನರಿಗೆ ತಲುಪಿದೇಯೋ ಇಲ್ಲ ಅಂತ ಮತದಾರರ ಕೇಳಬೇಕು. ನಾನು ಚನ್ನಪಟ್ಟಣ ಮತದಾರರ ಜೊತೆ ನಾನೇ ಮಾತನಾಡಿದ್ದೇನೆ. ಅವರನ್ನು ಕೇಳಿದ್ರೆ ಕುಮಾರಸ್ವಾಮಿಗೆ ಗೊತ್ತಾಗುತ್ತೆ. 5% ಮಾತ್ರ ಗೃಹಲಕ್ಷ್ಮೀ ತೊಂದರೆ ಆಗಿದೆ ಎಂದರು.