HomeLife StyleHealth Care: ಹೃದಯಾಘಾತ ಎಂದರೇನು? Heart Attack ಹೇಗೆ ಸಂಭವಿಸುತ್ತದೆ!?

Health Care: ಹೃದಯಾಘಾತ ಎಂದರೇನು? Heart Attack ಹೇಗೆ ಸಂಭವಿಸುತ್ತದೆ!?

For Dai;y Updates Join Our whatsapp Group

Spread the love

ಇತ್ತೀಚಿನ ದಿನಗಳಲ್ಲಿ ಹೃದಯಾಘಾತಕ್ಕೆ ಚಿಕ್ಕವಯಸ್ಸಿನವರೇ ಬಲಿಯಾಗುತ್ತಿರುವುದು ಆತಂಕಕಾರಿ ಸಂಗತಿ ಆಗಿದೆ. ನೆನ್ನೆಯವರೆಗೂ ಚೆನ್ನಾಗಿದ್ದರವೂ ಇಂದು ಇನ್ನಿಲ್ಲ ಎಂಬ ವಿಚಾರ ಯಾರಿಗೂ ಕೂಡ ಅರಗಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಅಷ್ಟಕ್ಕೂ ಹೃದಯಾಘಾತ ಎಂದರೇನು? ಇದು ಹೇಗೆ ಸಂಭವಿಸುತ್ತೆ ಇದರ ಮುಖ್ಯ ಲಕ್ಷಣಗಳೇನು? ಈ ಎಲ್ಲವುದರ ಬಗ್ಗೆ ಕೆಲವೊಂದಷ್ಟು ಮಾಹಿತಿಯನ್ನು ನಾವಿಂದು ನಿಮಗೆ ತಿಳಿಸುತ್ತೇವೆ.

ಇಂದಿನ ದಿನಗಳಲ್ಲಿ ಹೃದಯಕ್ಕೆ ಸಂಬಂಧಪಟ್ಟ ಕಾಯಿಲೆಗೆ ಗುರಿಯಾಗುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಇನ್ನೂ ಬಾಳಿ ಬದುಕಬೇಕಾದ ಯುವಜನತೆಯರು, ಸಣ್ಣ ವಯಸ್ಸಿನಲ್ಲಿಯೇ ಈ ಕಾಯಿಲೆಗೆ ಬಲಿಯಾಗುತ್ತಿರುವುದು, ನಿಜಕ್ಕೂ ನೋವುಂಟು ಮಾಡುತ್ತಿದೆ.

ಹೀಗಾಗಿ ವಯಸ್ಸಿನ ಬಗ್ಗೆ ಯೋಚಿಸದೇ ಈಗ ಹೃದಯವನ್ನು ಕಾಳಜಿ ಮಾಡುವುದು ಮುಖ್ಯವಾಗಿದೆ. ಯಾವುದೇ ರೋಗ ಆಗಲಿ ಬಂದ ಮೇಲೆ ಆರೈಕೆ ಮಾಡಿಕೊಳ್ಳುವುದಕ್ಕಿಂತ ಬರುವ ಮುನ್ನ ಎಚ್ಚರ ವಹಿಸುವುದು ಮುಖ್ಯ.

ಹೃದಯಾಘಾತ ಎಂದರೇನು?: ಹೃದಯಕ್ಕೆ ರಕ್ತ ಸಂಚಲನೆ ಹಠಾತ್ ಆಗಿ ಬ್ಲಾಕ್ ಆಗುತ್ತದೆ. ಇದರ ಪ್ರತಿಫಲವಾಗಿ ಹೃದಯ ಸ್ತಂಭನ ಉಂಟಾಗಿ ಬಳಿಕ ಹೃದಯದಿಂದ ದೇಹಕ್ಕೆ ರಕ್ತ ಸಂಚಾರ ನಿಂತು ಹೋಗುತ್ತದೆ. ಇದನ್ನು ಹೃದಯಾಘಾತ ಎನ್ನುತ್ತಾರೆ.

ಹೃದಯಾಘಾತದ ಲಕ್ಷಣಗಳು: ಹೃದಯಾಘಾತವಾದಾಗ ಎಡ ಭಾಗದ ಎದೆಯಲ್ಲಿ ನೋವು ಕಾಣಿಸಿಕೊಳ್ಳುತ್ತದೆ, ಆದರೆ ಎಲ್ಲರಿಗೂ ಇದೆ ರೀತಿ ಆಗುತ್ತದೆ ಅಂತಲ್ಲ. ಕೆಲವರಿಗೆ ಕತ್ತು, ಗಂಟಲು, ಹೊಟ್ಟೆಯ ಮೇಲ್ಭಾಗ, ಬೆನ್ನು, ತೋಳು, ಸೊಂಟ, ದವಡೆ, ಭುಜಗಳಲ್ಲಿ ನೋವು ಬರಬಹುದು. ಈ ರೀತಿಯ ನೋವು ಕೆಲ ದಿನಗಳ ಮುಂಚೆಯೇ ಕಂಡು ಬರುಬಹುದು.

ಹೃದಯಾಘಾತವು ಇದ್ದಕ್ಕಿದ್ದಂತೆ ಸಂಭವಿಸುವುದಿಲ್ಲ, ಅದು ನಮ್ಮ ಜೀವನಶೈಲಿಯ ಅಧಾರದ ಮೇಲೆ ಅವಲಂಬಿತವಾಗಿರುತ್ತದೆ. ಜೀವನಶೈಲಿ ಎಷ್ಟು ಉತ್ತಮವಾಗಿರುತ್ತದೆಯೋ ನಮ್ಮ ಆರೋಗ್ಯ ಅಷ್ಟೇ ಉತ್ತಮವಾಗಿರುತ್ತದೆ. ಇಲ್ಲಿ ಸ್ವಲ್ಪ ಏರುಪೇರಾದರೂ ಇನ್ನಿಲ್ಲದ ಆರೋಗ್ಯ ಸಮಸ್ಯೆಗಳು ಆಹ್ವಾನ ನೀಡದೇ ಬಂದು ಬಿಡುತ್ತವೆ.

ಹೀಗೆ ಒಬ್ಬರು ಈ ಕೆಳಗಿನ ಸಮಸ್ಯೆಗಳನ್ನು ಅನುಭವಿಸುತ್ತಿದ್ದರೆ ಅವರು ಹೃದಯಾಘಾತಕ್ಕೆ ಒಳಗಾಗುವ ಸಾಧ್ಯತೆಗಳು ಹೆಚ್ಚು ಎಂದಿದ್ದಾರೆ. ಹಾಗಾದರೆ ತಜ್ಞರು ವಿವರಿಸಿರುವ ಆ ಐದು ಸಾಮಾನ್ಯ ಚಿಹ್ನೆಗಳನ್ನು ನೋಡೋಣ ಬನ್ನಿ.

ಆತಂಕ
ನಮ್ಮ ಕೆಲಸ, ವೇಳಾಪಟ್ಟಿ, ಜೀವನಶೈಲಿ ಎಲ್ಲವೂ ನೇರವಾಗಿ ನಮ್ಮ ಆತಂಕಕ್ಕೆ ಕಾರಣವಾಗಿದ್ದು, ಈ ಆತಂಕ ನಮ್ಮ ಹೃದಯದ ಸಮಸ್ಯೆಗಳನ್ನು ಹೆಚ್ಚಿಸುತ್ತದೆ. ಆತಂಕ ಮತ್ತು ಹೃದಯರೋಗ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ.

ಹೆಚ್ಚಾಗಿ ಯಾರು ಒತ್ತಡ, ಆತಂಕ, ಖಿನ್ನತೆಯಿಂದಾಲೇ ಜೀವನ ನಡೆಸುತ್ತಾರೋ ಅಂಥವರಲ್ಲಿ ಈ ಹೃದ್ರೋಗದ ಅಪಾಯ ಹೆಚ್ಚು.

ಬೆವರುವುದು

ಯಾವುದಾದರೂ ದೈಹಿಕ ಕೆಲಸ ಮಾಡಿದರೆ ಸಹಜವಾಗಿ ಕೆಲವರು ಬೆವರುತ್ತಾರೆ. ಆದರೆ ಏನೂ ಮಾಡದೇ ಸುಖಾಸುಮ್ಮನೆ ಬೆವರಿದರೆ ಅದು ಸಾಮಾನ್ಯವಲ್ಲ. ಇದು ಭವಿಷ್ಯದ ಹಾರ್ಟ್‌ ಅಟ್ಯಾಕ್‌ ಸಂಕೇತ ಎನ್ನುತ್ತಾರೆ ದೀಪಕ್ ಭಟ್‌.‌ ಬೇಗ ಬೆವರುವುದು, ವ್ಯಕ್ತಿಯು ಯಾವುದೇ ದೈಹಿಕ ಚಟುವಟಿಕೆಯಲ್ಲಿ ಭಾಗವಹಿಸದಿದ್ದಾಗಲೂ ಬೆವರುವುದು ಹೃದಯಾಘಾತದ ಮೊದಲ ಚಿಹ್ನೆಗಳಲ್ಲಿ ಒಂದು ಎಂದು ಅವರು ಎಚ್ಚರಿಸುತ್ತಾರೆ

ಕಾಲು ನೋವು:-

ಕಾಲು ನೋವು ಅಂದರೆ ವಯಸ್ಸಾಗ್ತಿದೆ ಹೀಗಾಗಿ ಇದೆಲ್ಲಾ ಸಹಜ ಎಂದು ಭಾವಿಸಿ ಸುಮ್ಮನಾಗಿಬಿಡುತ್ತಾರೆ. ಆದರೆ ಡಾ. ದೀಪಕ್‌ ಈ ಲಕ್ಷಣವನ್ನು ಹೃದ್ರೋಗದ ಅನಿರೀಕ್ಷಿತ ಸಿಗ್ನಲ್ ಎಂದಿದ್ದಾರೆ. ಕಾಲುಗಳಲ್ಲಿ ಜುಮ್ಮೆನಿಸುವಿಕೆ ಮತ್ತು ನೋವು ವಾಸ್ತವವಾಗಿ ಭವಿಷ್ಯದ ಹೃದಯಘಾತದ ಪ್ರಮುಖ ಲಕ್ಷಣಗಳಾಗಿವೆ ಎಂದಿದ್ದಾರೆ.

ಆಯಾಸ
ಕೆಲಸ ಮಾಡಿ ದಿನದ ಕೊನೆಯಲ್ಲಿ ದಣಿವಾಗುವುದು ಸಹಜ, ಆದರೆ ದಿನಂಪ್ರತಿ ಇದೇ ಆಯಾಸ, ಸುಸ್ತು ಇದ್ದರೆ ಇದಕ್ಕೆ ಬೇರೆಯದ್ದೇ ಕಾರಣವಿರುತ್ತದೆ. ಹೀಗೆ ಹೃದಯಘಾತದ ಅಪಾಯದ ಲಕ್ಷಣಗಳಲ್ಲಿ ಈ ಆಯಾಸ ಕೂಡ ಒಂದು ಎನ್ನುತ್ತಾರೆ ವೈದ್ಯರು.

ಹೊಟ್ಟೆಯ ತೊಂದರೆಗಳು
ಹೃದ್ರೋಗದಿಂದ ಬಳಲುತ್ತಿರುವವರಲ್ಲಿ ಸಾಮಾನ್ಯವಾಗಿ ಹೊಟ್ಟೆ ಮತ್ತು ಜೀರ್ಣಕ್ರಿಯೆಯ ಸಮಸ್ಯೆಗಳು ಕಂಡು ಬರುತ್ತವೆ. ಹೃದಯರಕ್ತನಾಳದ ಸ್ಥಿತಿಯು ಹದಗೆಟ್ಟಾಗ ಹೊಟ್ಟೆಗೆ ಸಂಬಂಧಿಸಿದ ತೊಂದರೆಗಳು ಸಂಭವಿಸುತ್ತವೆ. ಇದು ಮೊದಲಿಗೆ ಸಾಮಾನು ಹೊಟ್ಟೆ ನೋವು ಎಂದೆನಿಸಿದರೂ ಈ ಲಕ್ಷಣ ಹಾರ್ಟ್‌ ಅಟ್ಯಾಕ್‌ಗೆ ನೇರವಾಗಿ ಸಂಬಂಧಿಸಿದೆ

ಹೃದಯಾಘಾತ ಉಂಟಾದಾಗ ಒಂದೊಂದು ಕ್ಷಣವೂ ಅಮೂಲ್ಯವಾಗಿರುತ್ತದೆ. ಒಂದು ವೇಳೆ ಹೃದಯಾಘಾತವಾಗಿ ವ್ಯಕ್ತಿ ನೆಲಕ್ಕೆ ಕುಸಿದರೆ ಕೂಡಲೇ ಆಂಬ್ಯುಲೆನ್ಸ್ಗೆ ಕರೆ ಮಾಡಿ ನಂತರ, ಆ ವ್ಯಕ್ತಿಯ ಎದೆಯನ್ನು ಜೋರಾಗಿ ಅದುಮಬೇಕು, ಜೋರಾಗಿ ಗುದ್ದಿದರೂ ಪರ್ವಾಗಿಲ್ಲ. ಸಾಧ್ಯವಾದರೆ ಅವರ ಬಾಯಿಗೆ ನಿಮ್ಮ ಬಾಯಿ ಇಟ್ಟು ಊದಿ. ಈ ರೀತಿ ಮಾಡುವುದರಿಂದ ಬದುಕುಳಿಯುವ ಸಾಧ್ಯತೆ ಹೆಚ್ಚು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!