ಆನೇಕಲ್: ಹೊರಗಿನವರು ಬೆಂಗಳೂರಿಗೆ, ಅದರಲ್ಲಿಯೂ ಕರ್ನಾಟಕಕ್ಕೆ ಬಂದರೆ ಕನ್ನಡ ಮಾತನಾಡುವುದಿಲ್ಲ. ಸ್ಥಳೀಯ ಭಾಷೆ ಕಲಿಯಲು ಮುಂದಾಗುತ್ತಿಲ್ಲ ಎಂಬ ಆರೋಪಗಳು ಸಾಮಾನ್ಯವಾಗಿದೆ. ಇದೀಗ ಅಂತಹದ್ದೆ ಘಟನೆ ಆನೇಕಲ್ ತಾಲೂಕಿನ ಸೂರ್ಯ ನಗರದಲ್ಲಿ ನಡೆದಿದೆ.
ಚಂದಾಪುರದ ಸೂರ್ಯಸಿಟಿಯ ಎಸ್‌ಬಿಐ ಬ್ಯಾಂಕ್ ಮ್ಯಾನೇಜರ್ ಕನ್ನಡ ಮಾತಾಡಲ್ಲ ಎಂದು ಊಡಾಫೆ ವರ್ತನೆ ತೋರಿದ್ದಾರೆ. ಕನ್ನಡಿಗರನ್ನು ಕೆರಳಿಸುವ ರೀತಿಯಲ್ಲಿ ಮಾತನಾಡಿದ್ದಾರೆ. ಕನ್ನಡ ಮಾತಾಡು ಎಂದ ಗ್ರಾಹಕನಿಗೆ ಹಿಂದಿ ಮಾತಾಡ್ತೇನೆ, ನಾನು ಕನ್ನಡ ಮಾತನಾಡಲ್ಲ ಎಂದು ಉಡಾಫೆ ಉತ್ತರ ನೀಡಿದ್ದಾರೆ.
ಚಂದಾಪುರದ ಸೂರ್ಯಸಿಟಿ ಯ SBI Branch Manager ಕನ್ನಡ ಮಾತಾಡುವುದಿಲ್ಲ ಎಂದು ಧಿಮಾಕು ತೋರಿಸಿದ್ದಾಳೆ.
ಕೂಡಲೇ ಈಕೆಯ ಮೇಲೆ ಕ್ರಮ ಆಗಬೇಕು. ಕರ್ನಾಟಕದಲ್ಲಿ ಕನ್ನಡ ಮಾತಾಡೊಲ್ಲ ಅಂದ್ರೆ ಏನಕ್ಕೆ ಇರಬೇಕು ಇಲ್ಲಿ? pic.twitter.com/llkqTjsW7R
— 👑Che_Krishna🇮🇳💛❤️ (@CheKrishnaCk_) May 20, 2025
ಕನ್ನಡ ಮಾತನಾಡಿ ಎಂದಿದ್ದಕ್ಕೆ ಇದು ಇಂಡಿಯಾ ನಾನು ಹಿಂದಿಯನ್ನೇ ಮಾತನಾಡುತ್ತೇನೆ ಎಂದು ಬ್ಯಾಂಕ್ ಮ್ಯಾನೇಜರ್ ಉಡಾಫೆಯಾಗಿ ಮಾತನಾಡಿರುವ ವಿಡಿಯೋವನ್ನು ಗ್ರಾಹಕರು ಚಿತ್ರೀಕರಿಸಿ ಅದನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.