ಖಾತೆ ಯಾವುದಾದರೂ ಇರಲಿ, ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ: ಶಾಸಕ ರಾಜು ಕಾಗೆ!

0
Spread the love

ಬೆಳಗಾವಿ:- ಖಾತೆ ಯಾವುದಾದರೂ ಇರಲಿ, ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂದು ಶಾಸಕ ರಾಜು ಕಾಗೆ ಹೇಳಿದ್ದಾರೆ.

Advertisement

ಈ ಸಂಬಂಧ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆಯಾದರೆ ನಾನು ಸಹ ಸಚಿವ ಸ್ಥಾನದ ಆಕಾಂಕ್ಷಿ. ಯಾವುದೇ ಖಾತೆ ಕೊಟ್ಟರೂ ಸೂಕ್ತವಾಗಿ ನಿಭಾಯಿಸುವೆ ಎಂದರು.

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ಬೆಳಗಾವಿ ಜಿಲ್ಲೆಯ ಎಲ್ಲ ಪಂಚಮಸಾಲಿ ಸಮುದಾಯದ ಶಾಸಕರು, ಸಚಿವರು ಮುಖ್ಯಮಂತ್ರಿಗಳನ್ನು ಭೇಟಿ ಆಗಲಿದ್ದೇವೆ. ಅಧಿವೇಶನದ ಸಮಯದಲ್ಲಿ ಸ್ವಾಮೀಜಿ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಆಗುತ್ತೇವೆ. ಎಲ್ಲಾ ನಾಯಕರು ಒಗ್ಗಟ್ಟಾಗಿದ್ದೇವೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ನಾಯಕರುಗಳು ಚರ್ಚಿಸಿ ಒಂದು ಹಂತಕ್ಕೆ ಬರುತ್ತೇವೆ ಎಂದು ತಿಳಿಸಿದರು.


Spread the love

LEAVE A REPLY

Please enter your comment!
Please enter your name here