ಗೃಹಲಕ್ಷ್ಮಿ ಹಣ ಜಮೆ ಆಗೋದು ಯಾವಾಗ!?: ಸಚಿವೆ ಹೆಬ್ಬಾಳ್ಕರ್ ಹೇಳಿದ್ದೇನು!?

0
Spread the love

ಬೆಂಗಳೂರು:- ಕಳೆದ ಎರಡು ತಿಂಗಳಿಂದ ಗೃಹಲಕ್ಷ್ಮಿ ಹಣ ಜಮೆ ಆಗದೆ ಮಹಿಳೆಯರು ಕಂಗಾಲಾಗಿದ್ದಾರೆ. ಒಂದೆಡೆ ಸರ್ಕಾರ ಹಣ ಜಮೆ ಆಗುತ್ತೆ ಎನ್ನುತ್ತಾರೆ ವರೆತೂ ಇದುವರೆಗೂ ಜಮೆ ಆಗಿಲ್ಲ. ಹೀಗಾಗಿ ಮಹಿಳೆಯರು ಬೇಸರ ಹೊರ ಹಾಕುತ್ತಿದ್ದಾರೆ.

Advertisement

ಇದರ ಮಧ್ಯೆ ಗೃಹಲಕ್ಷ್ಮಿ ಹಣ ವಿಳಂಬ ಆಗುತ್ತಿರುವುದಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟನೆ ಕೊಟ್ಟಿದ್ದಾರೆ.

ಗೃಹಲಕ್ಷ್ಮಿ ಯೋಜನೆಗೆ ಪ‌್ರತಿ ತಿಂಗಳಿಗೆ 2,400 ಕೋಟಿ ರೂ. ಖರ್ಚಾಗುತ್ತಿದೆ. ಮಂಡ್ಯದಲ್ಲಿ ಡಿಪಿಟಿಗೆ ಪುಷ್ ಮಾಡಿ ಮೂರು ದಿನಗಳಾದವು. ಇನ್ನೂ ನಾಲ್ಕೈದು ಜಿಲ್ಲೆಗಳಿಗೆ ಯೋಜನೆಯ ಹಣ ದೊರೆಯಬೇಕಿದೆ. ಬ್ಯಾಂಕ್​​​ಗಳಿಗೆ ಹಣ ಕಳುಹಿಸಿರುತ್ತೇವೆ. ಸ್ಥಳೀಯ ಮಟ್ಟವಾಗಿ ಯಜಮಾನಿಯರ ಖಾತೆಗೆ ವರ್ಗಾವಣೆಯಾಗಬೇಕು. ದೊಡ್ಡ ಮೊತ್ತದ ಹಣ ಆಗಿರುವ ಕಾರಣ ವಿಳಂಬ ಆಗುತ್ತಿರುತ್ತದೆ ಎಂದರು.

ಜೂನ್ ತಿಂಗಳ ಹಣ ವರ್ಗಾವಣೆಯಾಗಿದೆ. ಜುಲೈ ತಿಂಗಳ ಹಣ ಇನ್ನೆರಡು ದಿನಗಳಲ್ಲಿ ಖಾತೆಗಳಿಗೆ ವರ್ಗಾವಣೆಯಾಗಲಿದೆ. ಆಗಸ್ಟ್ ತಿಂಗಳ ಹಣ ಕೂಡ ಯಜಮಾನಿಯರ ಖಾತೆಗೆ ವರ್ಗಾವಣೆ ಮಾಡುತ್ತೇವೆ. ವಿಳಂಬ ಆಗಬಾರದು ಎಂಬುದು ನಮ್ಮ ಚಿಂತನೆ. ಒಂದು‌ ದಿನಕ್ಕೆ ನನಗೆ 500 ಕರೆಗಳು ಬರುತ್ತವೆ.

ಮಂತ್ರಿಯಾಗಿ ಎಲ್ಲ ಕರೆಗಳಿಗೂ ನಾನು ಉತ್ತರ ನೀಡುತ್ತಿದ್ದೇನೆ. ಹಣ ವರ್ಗಾವಣೆಯಾಗುತ್ತದೆ ಎಂದು ಸಮಾಧಾನ ಮಾಡುತ್ತಾ ಇರುತ್ತೇನೆ ಎಂದು ಅವರು ತಿಳಿಸಿದರು.

ವಿಳಂಬ ಆಗದೇ ಇರುವಂತೆ ನೋಡಿಕೊಳ್ಳಲು ನಮ್ಮ ತಂಡ ಹಗಲು ರಾತ್ರಿ ಕೆಲಸ ಮಾಡುತ್ತಿದೆ. ಈಗ ಹಣ ವರ್ಗಾವಣೆ ಪ್ರಕ್ರಿಯೆ ಶುರು ಮಾಡಿದರೂ 10 ರಿಂದ 12 ದಿನ ಬೇಕಾಗುತ್ತದೆ. ಯಜಮಾನಿಯರ ಹಣ ಎಲ್ಲಾ ಜಿಲ್ಲೆಗಳಿಗೂ ತಲುಪಬೇಕು ಎಂದು ಶ್ರಮಿಸುತ್ತಿದ್ದೇವೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.


Spread the love

LEAVE A REPLY

Please enter your comment!
Please enter your name here