ನವದೆಹಲಿ: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 22ನೇ ಕಂತಿನ ಹಣಕ್ಕಾಗಿ ಕಾಯುತ್ತಿರುವ ಕೋಟ್ಯಂತರ ರೈತರಿಗೆ ಮಹತ್ವದ ಮಾಹಿತಿ ಲಭ್ಯವಾಗಿದೆ. ಮಾರ್ಚ್ ಮೊದಲ ವಾರದಲ್ಲಿ ಹಣ ಜಮೆಯಾಗಲಿದೆ ಎಂಬ ನಿರೀಕ್ಷೆ ಇದ್ದರೂ, ಇದೀಗ ಹಣ ಜಮೆಯಾಗುವ ನಿಖರ ದಿನಾಂಕದ ಕುರಿತು ಹೊಸ ಮಾಹಿತಿ ಹೊರಬಿದ್ದಿದೆ.
ಪಿಎಂ ಕಿಸಾನ್ ಯೋಜನೆಯಡಿ ಕೇಂದ್ರ ಸರ್ಕಾರವು ರೈತರಿಗೆ ವರ್ಷಕ್ಕೆ ₹6,000 ಆರ್ಥಿಕ ನೆರವು ನೀಡುತ್ತದೆ. ಈ ಮೊತ್ತವನ್ನು ಪ್ರತಿ ನಾಲ್ಕು ತಿಂಗಳಿಗೊಮ್ಮೆ ₹2,000ರಂತೆ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮೆ ಮಾಡಲಾಗುತ್ತದೆ.
ಇತ್ತೀಚಿನ ಮಾಧ್ಯಮ ವರದಿಗಳ ಪ್ರಕಾರ, ಮಾರ್ಚ್ 13ರಂದು ರೈತರ ಬ್ಯಾಂಕ್ ಖಾತೆಗಳಿಗೆ 22ನೇ ಕಂತಿನ ₹2,000 ಜಮೆಯಾಗುವ ಸಾಧ್ಯತೆ ಇದೆ. ಆದರೆ ಈ ಬಗ್ಗೆ ಕೇಂದ್ರ ಸರ್ಕಾರದಿಂದ ಇನ್ನೂ ಅಧಿಕೃತ ಪ್ರಕಟಣೆ ಹೊರಬೀಳಬೇಕಿದೆ.
ಈ ರೈತರಿಗೆ ಸಿಗಲ್ಲ ಕಂತಿನ ಲಾಭ
ಕೆಲವು ತಾಂತ್ರಿಕ ಪ್ರಕ್ರಿಯೆಗಳನ್ನು ಪೂರ್ಣಗೊಳಿಸದ ರೈತರು ಈ ಬಾರಿ ಪಿಎಂ ಕಿಸಾನ್ ಹಣದಿಂದ ವಂಚಿತರಾಗುವ ಸಾಧ್ಯತೆ ಇದೆ.
- eKYC ಪೂರ್ಣಗೊಳಿಸದವರು
- ಭೂ ದಾಖಲೆಗಳ ಪರಿಶೀಲನೆ ಪೂರ್ಣವಾಗದವರು
- ಬ್ಯಾಂಕ್ ಖಾತೆ ಸಂಖ್ಯೆ ಅಥವಾ IFSC ಕೋಡ್ ತಪ್ಪಾಗಿ ನೀಡಿದವರು
- ಅರ್ಜಿಯಲ್ಲಿ ಹೆಸರು ಅಥವಾ ಆಧಾರ್ ಸಂಖ್ಯೆ ತಪ್ಪಾಗಿ ನಮೂದಿಸಿದವರು
ಉತ್ತರ ಪ್ರದೇಶ, ಬಿಹಾರ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಪಿಎಂ ಕಿಸಾನ್ ಸೌಲಭ್ಯ ಪಡೆಯಲು ‘ಫಾರ್ಮರ್ ಐಡಿ’ ಕಡ್ಡಾಯಗೊಳಿಸಲಾಗಿದೆ. ಅಗ್ರಿಸ್ಟಾಕ್ ಯೋಜನೆಯಡಿ ಈ ಐಡಿಗಳನ್ನು ಸಿದ್ಧಪಡಿಸಲು ವಿಶೇಷ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಫಾರ್ಮರ್ ಐಡಿ ಇಲ್ಲದ ರೈತರು ಹಣ ಪಡೆಯುವಲ್ಲಿ ತೊಂದರೆ ಎದುರಿಸಬೇಕಾಗಬಹುದು ಎಂದು ತಿಳಿಸಲಾಗಿದೆ.



