ವಿಜಯಪುರ: ಸಿದ್ದರಾಮಯ್ಯ ಮೇಲೆ ಆರೋಪ ಬಂದಾಗಲೆಲ್ಲಾ ಜಾತಿ ಜನಗಣತಿ ತರುತ್ತಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆರೋಪ ಮಾಡಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಜಾತಿ ಜನಗಣತಿ ಮೂಲಕ ವಿವಾದ ಸೃಷ್ಟಿಸಿದ್ದಾರೆ.
ಸಿದ್ದರಾಮಯ್ಯ ಮೇಲೆ ಆರೋಪ ಬಂದಾಗಲೆಲ್ಲಾ ಜಾತಿ ಜನಗಣತಿ ತರುತ್ತಾರೆ. ಅಧಿಕಾರದಿಂದ ಇಳಿಯುವ ಸಮಯ ಬಂದಾಗಲೆಲ್ಲ ಹೀಗೆ ಮಾಡುತ್ತಾರೆ ಎಂದರು.
ಲಿಂಗಾಯತ, ಒಕ್ಕಲಿಗರು, ದಲಿತರನ್ನು ಒಡೆಯುವ ಹುನ್ನಾರ ಇದು. ಮುಸ್ಲಿಮರನ್ನು ಪ್ರೊಜೆಕ್ಟ್ ಮಾಡಲು ಜಾತಿ ಗಣತಿ ಮಂಡನೆ ಮಾಡಿದ್ದಾರೆ. ಕಾಂಗ್ರೆಸ್‌ನಲ್ಲಿ ಆಂತರಿಕ ಯುದ್ಧ ನಡೆಯುತ್ತದೆ. ಸಿದ್ದರಾಮಯ್ಯ ಬಳಿಕ ಡಿಕೆಶಿ ಪಟ್ಟ ಏರಲು ಕಾಯುತ್ತಿದ್ದಾರೆ.
ನವೆಂಬರ್, ಡಿಸೆಂಬರ್‌ನಲ್ಲಿ ಕಾಂಗ್ರೆಸ್‌ನಲ್ಲಿ ಮಹಾ ಸ್ಫೋಟವಾಗಲಿದೆ. ಟೈಂ ಬಾಂಬ್ ಸ್ಫೋಟವಾಗಲಿದೆ. ಅಧಿಕಾರದಲ್ಲಿ ಮುಂದುವರೆಯಲು ಗೊಂದಲ ಸೃಷ್ಟಿಸಿದ್ದಾರೆ. ಡಿಕೆಶಿ ನವೆಂಬರ್, ಡಿಸೆಂಬರ್‌ಗೆ ಟೈಂ ಬಾಂಬ್ ಫಿಕ್ಸ್ ಮಾಡಿದ್ದಾರೆ. ಅದು ಸ್ಫೋಟವಾಗುವ ಸಾಧ್ಯತೆ ಇದೆ ಎಂದು ತಿಳಿಸಿದರು.