ನವದೆಹಲಿ: ಯಡಿಯೂರಪ್ಪರನ್ನ ಸಿಎಂ ಸ್ಥಾನದಿಂದ ತೆಗೆದಾಗ ಬಿಜೆಪಿಯವ್ರು ಎಲ್ಲಿ ಹೋಗಿದ್ರು ಎಂದು ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಪ್ರಶ್ನೆ ಮಾಡಿದ್ದಾರೆ. ಕೆ.ಎನ್.ರಾಜಣ್ಣ ಅವರನ್ನು ಸಂಪುಟದಿಂದ ವಜಾ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಮಾತನಾಡಿದ ಅವರು, ರಾಜಣ್ಣ ಅವರದ್ದೇ ಆದ ಕೊಡುಗೆ ರಾಜ್ಯಕ್ಕೆ ಇದೆ. ಅವರ ತಪ್ಪುಗಳ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತೆ ಎಂದರು.
Advertisement
ರಾಜಣ್ಣನಿಗೆ ಅನ್ಯಾಯ ಆಗಿದೆ ಎಂದು ಬಿಜೆಪಿ ನಾಯಕರು ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ. ಪಾಪ ಬಿಜೆಪಿ ಸತ್ಯಹರಿಶ್ಚಂದ್ರರು, ಯಡಿಯೂರಪ್ಪರನ್ನ ಸಿಎಂ ಸ್ಥಾನದಿಂದ ತೆಗೆದು ಹಾಕಿದಾಗ ಎಲ್ಲಿ ಹೋಗಿದ್ದರು? ಈ ಸತ್ಯವಂತರು, ಜಗದೀಶ್ ಶೆಟ್ಟರ್, ಬಸನಗೌಡ ಪಾಟೀಲ್ ಯತ್ನಾಳರನ್ನ ಆರು ವರ್ಷ ವಜಾ ಮಾಡಿದಾಗ ಈ ಸತ್ಯವಂತರು ಎಲ್ಲಿ ಹೋಗಿದ್ದರು ಎಂದು ಟಾಂಗ್ ಕೊಟ್ಟಿದ್ದಾರೆ.