HomePolitics Newsಎಲ್ಲಿ ಬಿಜೆಪಿ, ಅಲ್ಲಿ ಅಭಿವೃದ್ಧಿ, ಬಂಗಾಳ ಭಯಮುಕ್ತವಾಗಿದೆ: ಪ್ರಧಾನಿ ಮೋದಿ

ಎಲ್ಲಿ ಬಿಜೆಪಿ, ಅಲ್ಲಿ ಅಭಿವೃದ್ಧಿ, ಬಂಗಾಳ ಭಯಮುಕ್ತವಾಗಿದೆ: ಪ್ರಧಾನಿ ಮೋದಿ

For Dai;y Updates Join Our whatsapp Group

Spread the love

ನವದೆಹಲಿ: ಪಂಚರಾಜ್ಯ ಚುನಾವಣಾ ಫಲಿತಾಂಶ ಹೊರಬಂದ ಹಿನ್ನೆಲೆಯಲ್ಲಿ ಬಿಜೆಪಿ ಕಚೇರಿಯಲ್ಲಿ ನಡೆದ ವಿಜಯೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಂಗಾಳ ಜನತೆಗೆ ಭರವಸೆ ನೀಡಿದ್ದಾರೆ.

“ಗಂಗೋತ್ರಿಯಿಂದ ಗಂಗಾಸಾಗರವರೆಗೆ ಕಮಲ ಅರಳಿದೆ. ಬಂಗಾಳದಲ್ಲಿ ಹೊಸ ಸೂರ್ಯೋದಯವಾಗಿದ್ದು, ರಾಜ್ಯ ಭಯಮುಕ್ತವಾಗಿದೆ” ಎಂದು ಅವರು ತಿಳಿಸಿದ್ದಾರೆ. ಬಂಗಾಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಸಾಧಿಸಿದ ಗೆಲುವಿಗೆ ಕಾರಣರಾದ ಪಕ್ಷದ ಕಾರ್ಯಕರ್ತರನ್ನು ಅಭಿನಂದಿಸಿದ ಅವರು, “ನಿಮ್ಮ ಉತ್ತಮ ಭವಿಷ್ಯಕ್ಕಾಗಿ ಹಗಲು-ರಾತ್ರಿ ಶ್ರಮಿಸುತ್ತೇವೆ” ಎಂದು ಭರವಸೆ ನೀಡಿದ್ದಾರೆ.

ಚುನಾವಣೆಯಲ್ಲಿ ಗೆಲುವು-ಸೋಲು ಸಹಜವಾದರೂ, ಐದು ರಾಜ್ಯಗಳ ಜನತೆ ಭಾರತ ಪ್ರಜಾಪ್ರಭುತ್ವದ ಶಕ್ತಿಯನ್ನು ವಿಶ್ವಕ್ಕೆ ತೋರಿಸಿದ್ದಾರೆ. “ಪ್ರಜಾಪ್ರಭುತ್ವ ನಮ್ಮ ನರನಾಡಿಗಳಲ್ಲಿ ಹರಿಯುವ ಶಕ್ತಿ. ಈ ಗೆಲುವು ಭಾರತದ ಸಂವಿಧಾನಕ್ಕೂ ಸಲ್ಲುತ್ತದೆ” ಎಂದು ಅವರು ಹೇಳಿದ್ದಾರೆ.

ಅಸ್ಸಾಂ, ತಮಿಳುನಾಡು, ಪುದುಚೇರಿ ಹಾಗೂ ಕೇರಳ ರಾಜ್ಯಗಳಲ್ಲಿ ದಾಖಲೆ ಮಟ್ಟದ ಮತದಾನ ನಡೆದಿದ್ದು, ಮಹಿಳೆಯರ ಭಾಗವಹಿಸುವಿಕೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ, ಸಿಬ್ಬಂದಿ ಹಾಗೂ ಭದ್ರತಾ ಪಡೆಗಳ ಸೇವೆಯನ್ನು ಅವರು ಶ್ಲಾಘಿಸಿದ್ದಾರೆ. ಅಸ್ಸಾಂನಲ್ಲಿ ಮೂರನೇ ಬಾರಿ ಬಿಜೆಪಿ ನೇತೃತ್ವದ ಮೈತ್ರಿಕೂಟಕ್ಕೆ ಜನರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪುದುಚೇರಿಯಲ್ಲಿಯೂ ಮೈತ್ರಿಕೂಟದ ಮೇಲೆ ಜನರು ನಂಬಿಕೆ ಇಟ್ಟಿದ್ದಾರೆ ಎಂದರು.

“ಎಲ್ಲಿ ಬಿಜೆಪಿ, ಅಲ್ಲಿ ಅಭಿವೃದ್ಧಿ” ಎಂಬ ಧ್ಯೇಯದೊಂದಿಗೆ ಕೆಲಸ ಮಾಡುತ್ತಿದ್ದೇವೆ. ದೇಶದ 20ಕ್ಕೂ ಹೆಚ್ಚು ರಾಜ್ಯಗಳಲ್ಲಿ ಬಿಜೆಪಿ ಅಥವಾ ಮೈತ್ರಿಕೂಟದ ಸರ್ಕಾರವಿದೆ. ಗುಜರಾತ್ ಸೇರಿದಂತೆ ಸ್ಥಳೀಯ ಚುನಾವಣೆಯಲ್ಲಿಯೂ ಪಕ್ಷಕ್ಕೆ ಭಾರೀ ಬೆಂಬಲ ದೊರೆತಿದೆ. ಜನಸಂಘದ ಸ್ಥಾಪಕ ಶ್ಯಾಮ ಪ್ರಸಾದ್ ಮುಖರ್ಜಿ ಅವರ ಕನಸಿನ ಬಂಗಾಳ ನಿರ್ಮಾಣದ ದಾರಿ ಈಗ ತೆರೆದಿದೆ.“ಬಂಗಾಳ ಭಯಮುಕ್ತವಾಗಿದೆ, ಹೊಸ ಅಧ್ಯಾಯ ಆರಂಭವಾಗಿದೆ” ಎಂದರು.

ಕೊನೆಯಲ್ಲಿ, ಬಂಗಾಳ ಜನತೆಗೆ ಭರವಸೆ ನೀಡಿದ ಅವರು, ಮಹಿಳೆಯರಿಗೆ ಸುರಕ್ಷತೆ, ಯುವಕರಿಗೆ ಉದ್ಯೋಗ ಹಾಗೂ ಆರೋಗ್ಯ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ. ನುಸುಳುವಿಕೆ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!