ಭೂಸ್ವಾಧೀನಕ್ಕೆ BJP ಸರ್ಕಾರಕ್ಕೆ ಸಹಕಾರ ಕೊಟ್ಟವರು ಈಗ ನನ್ನನ್ನು ಪ್ರಶ್ನೆ ಮಾಡುತ್ತಿರುವುದೇಕೆ: ಡಿ.ಕೆ. ಶಿವಕುಮಾರ್ ಪ್ರಶ್ನೆ

0
Spread the love

ರಾಮನಗರ: “ಬಿಡದಿಯಲ್ಲಿ ಗ್ರೇಟರ್ ಬೆಂಗಳೂರು ಸಮಗ್ರ ನಗರ ಯೋಜನೆಗೆ ವಿರೋಧ ಮಾಡುತ್ತಿರುವ ದೇವೇಗೌಡರು, ಕುಮಾರಸ್ವಾಮಿ, ಮಾಜಿ ಶಾಸಕ ಮಂಜುನಾಥ್ ಅವರು, ಬಿಜೆಪಿ ಸರ್ಕಾರ 900 ಎಕರೆ ಜಾಗವನ್ನು ಕೆಐಎಡಿಬಿಎಗೆ ನೀಡುವಾಗ ಸಹಕಾರ ಕೊಟ್ಟಿದ್ದೇಕೆ? ಈಗ ನನ್ನನ್ನು ಪ್ರಶ್ನೆ ಮಾಡುತ್ತಿರುವುದೇಕೆ?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ. ರಾಮನಗರದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು.

Advertisement

ಜಿಬಿಐಟಿ ವಿರುದ್ಧ ದೇವೇಗೌಡರು ಹೋರಾಟ ಮಾಡುವ ಬಗ್ಗೆ ಕೇಳಿದಾಗ, “ದೇವೇಗೌಡರು ಹೋರಾಟ ಮಾಡುವುದಾದರೆ ಬಹಳ ಸಂತೋಷ. ಈ ಯೋಜನೆಗೆ ಅಧಿಸೂಚನೆ ಹೊರಡಿಸಿದ್ದೇ ಅವರ ಸುಪುತ್ರ. ಈ ಬಿಡದಿ ಟೌನ್ ಶಿಪ್ ಗೆ ಡಿಎಲ್ ಎಫ್ ಜೊತೆ ಒಪ್ಪಂದ ಮಾಡಿಕೊಂಡಿದ್ದೂ ಅವರೇ, ಹಣ ಕಟ್ಟಿಸಿಕೊಂಡಿದ್ದೂ ಅವರೇ. ಅವರ ಆಡಳಿತ ಅವಧಿಯಲ್ಲಿ ಈ ಭೂಮಿಯನ್ನು ಯಾಕೆ ಡಿನೋಟಿಫಿಕೇಷನ್ ಮಾಡಲಿಲ್ಲ? ಯಡಿಯೂರಪ್ಪ ಅವರು ಕೆಐಎಡಿಬಿಗೆ ಭೂಮಿ ಕೊಟ್ಟಾಗ ಆ ಭಾಗದ ಎಲ್ಲಾ ರೈತರು ಪರಿಹಾರ ಪಡೆದಿದ್ದಾರೆ. ಈಗ ಆ ಜಾಗ ಕೆಐಎಡಿಬಿ ಸ್ವತ್ತಾಗಿದೆ. ಇವರೆಲ್ಲ ಅಂದು ಪ್ರಶ್ನೆ ಮಾಡದೇ ಸಹಕಾರ ಕೊಟ್ಟಿದ್ದೇಕೆ?” ಎಂದು ಕೇಳಿದರು.

ಡಿನೋಟಿಫಿಕೇಶನ್ ಮಾಡುವುದು ಬೇಡ, ಆ ಭೂಮಿಯನ್ನು ಯಥಾಸ್ಥಿತಿಯಲ್ಲಿ ಬಿಡಿ ಎಂಬ ಆಗ್ರಹದ ಬಗ್ಗೆ ಕೇಳಿದಾಗ, “ಅವರ ಮಾತು ಕೇಳಲು ನಾನು ತಯಾರಿಲ್ಲ. ನಮ್ಮ ಸರ್ಕಾರ ಕಾನೂನು ಪ್ರಕಾರ ಕೆಲಸ ಮಾಡುತ್ತಿದೆ. ಯಡಿಯೂರಪ್ಪ ಅವರ ಕಾಲದಲ್ಲೂ ಇಲ್ಲಿನ ಭೂಮಿಗೆ 90 ಲಕ್ಷದಿಂದ 1 ಕೋಟಿಗೆ ಪರಿಹಾರ ನಿಗದಿ ಮಾಡಿದಾಗ, ಆ ಜಾಗವನ್ನು ಯಥಾಸ್ಥಿತಿಯಲ್ಲೇ ಬಿಡಿಸಬಹುದಿತ್ತಲ್ಲವೇ? ಯಾಕೆ ಬಿಡಿಸಲಿಲ್ಲ? ಆಗ ಮಂಜುನಾಥ್ ಅವರೇ ಶಾಸಕರಾಗಿದ್ದರಲ್ಲವೇ? ಈ ಯೋಜನೆಗೆ ರೈತರ ವಿರೋಧವಿಲ್ಲ, ರೈತರ ಸಂಪೂರ್ಣ ಸಹಕಾರವಿದೆ” ಎಂದು ತಿಳಿಸಿದರು.


Spread the love

LEAVE A REPLY

Please enter your comment!
Please enter your name here