HomePolitics Newsಅಧಿಕಾರ ಬೇಕಾದವರು ಡಿಕೆ ಶಿವಕುಮಾರ್ ಜೊತೆ ಹೋಗಿ, ಪಕ್ಷ ಕಟ್ಟುವವರು ನನ್ನ ಜೊತೆ ಬನ್ನಿ: ಬಿ.ಕೆ....

ಅಧಿಕಾರ ಬೇಕಾದವರು ಡಿಕೆ ಶಿವಕುಮಾರ್ ಜೊತೆ ಹೋಗಿ, ಪಕ್ಷ ಕಟ್ಟುವವರು ನನ್ನ ಜೊತೆ ಬನ್ನಿ: ಬಿ.ಕೆ. ಹರಿಪ್ರಸಾದ್

For Dai;y Updates Join Our whatsapp Group

Spread the love

ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಮತ್ತು ಸಚಿವ ಸ್ಥಾನಗಳಿಗಾಗಿ ರಾಜಕೀಯ ಮಾಡುವವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಹೋಗಬಹುದು. ಆದರೆ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವುದು, ಪಕ್ಷದ ಸಿದ್ಧಾಂತ ಹಾಗೂ ವರಿಷ್ಠರ ಕೈ ಬಲಪಡಿಸುವುದೇ ಗುರಿ ಎನ್ನುವವರು ನನ್ನೊಂದಿಗೆ ಬರಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ನೂತನ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾಗಿ ನೇಮಕಗೊಂಡ ಬಳಿಕ ಮಾತನಾಡಿದ ಅವರು, ಈ ಹೇಳಿಕೆಯನ್ನು ಯಾವುದೇ ಬಣ ರಾಜಕೀಯದ ದೃಷ್ಟಿಯಿಂದ ನೋಡಬಾರದು ಎಂದು ಸ್ಪಷ್ಟಪಡಿಸಿದರು.

ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಮೇಲೆ ನಂಬಿಕೆ ಇಟ್ಟು ಕೆಪಿಸಿಸಿ ಅಧ್ಯಕ್ಷರ ಜವಾಬ್ದಾರಿ ನೀಡಿದ್ದಾರೆ. ವಿದ್ಯಾರ್ಥಿ ದಶೆಯಿಂದಲೇ ಕಾಂಗ್ರೆಸ್ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ನಾನು, ಎಂದಿಗೂ ಅಧಿಕಾರ ಅಥವಾ ಸಚಿವ ಸ್ಥಾನಕ್ಕಾಗಿ ವರಿಷ್ಠರ ಮುಂದೆ ಬೇಡಿಕೆ ಇಟ್ಟಿಲ್ಲ ಎಂದು ಹೇಳಿದರು.

ನಾನು ಅಧಿಕಾರಕ್ಕಾಗಿ ರಾಜಕೀಯಕ್ಕೆ ಬಂದವನಲ್ಲ. ಕಾಂಗ್ರೆಸ್ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ, ಸಿಪಾಯಿಯಾಗಿ ಕೆಲಸ ಮಾಡಿದ್ದೇನೆ. ಹಿರಿಯ ನಾಯಕರು ಹಾಕಿಕೊಟ್ಟ ಮಾರ್ಗದಲ್ಲಿ ಸಾಗುತ್ತಾ, ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡುತ್ತೇನೆ ಎಂದು ತಿಳಿಸಿದರು.

2028ರ ವಿಧಾನಸಭೆ ಚುನಾವಣೆಗೆ ತಾವು ಮುಖ್ಯಮಂತ್ರಿ ಅಭ್ಯರ್ಥಿ ಎಂಬ ಚರ್ಚೆಗಳ ಕುರಿತು ಪ್ರತಿಕ್ರಿಯಿಸಿದ ಹರಿಪ್ರಸಾದ್, ಅದನ್ನು ವಾಟ್ಸಪ್ ಯುನಿವರ್ಸಿಟಿಯ ಅಪಪ್ರಚಾರ ಎಂದು ತಳ್ಳಿಹಾಕಿದರು.

ನಾನು ಹಿಂದುಳಿದ ಅಥವಾ ಮುಂದುವರಿದ ವರ್ಗಕ್ಕೆ ಸೇರಿದವನು ಎಂಬುದು ಮುಖ್ಯವಲ್ಲ. ನನ್ನ ಮುಂದಿರುವ ಜವಾಬ್ದಾರಿ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸುವುದು. ಸಿಎಎ, ಎಸ್‌ಐಆರ್ ಸೇರಿದಂತೆ ಜನಪರ ಹೋರಾಟಗಳಲ್ಲಿ ಪಕ್ಷವನ್ನು ಮುನ್ನಡೆಸಬೇಕಿದೆ. ಅಧಿಕಾರಕ್ಕಿಂತ ಹೋರಾಟ ಮತ್ತು ಸಂಘಟನೆ ನನಗೆ ಮುಖ್ಯ ಎಂದು ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವುದು, ಕಾರ್ಯಕರ್ತರನ್ನು ಒಗ್ಗೂಡಿಸುವುದು ಹಾಗೂ ಜನರ ಸಮಸ್ಯೆಗಳ ಪರವಾಗಿ ಹೋರಾಟ ನಡೆಸುವುದು ತಮ್ಮ ಮೊದಲ ಆದ್ಯತೆ ಎಂದು ಹರಿಪ್ರಸಾದ್ ತಿಳಿಸಿದರು. ಕಾಂಗ್ರೆಸ್ ಕೇವಲ ಅಧಿಕಾರದ ಪಕ್ಷವಲ್ಲ. ಇದು ಸಿದ್ಧಾಂತ ಮತ್ತು ಹೋರಾಟದ ಪಕ್ಷ. ಪಕ್ಷದ ತತ್ವ, ಮೌಲ್ಯಗಳು ಹಾಗೂ ವರಿಷ್ಠರ ನಾಯಕತ್ವವನ್ನು ಬಲಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದು  ಹೇಳಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!