ಮೈಸೂರು: ಸೌಜನ್ಯ ಪ್ರಕರಣವನ್ನು ಸಿಬಿಐಗೆ ಹಸ್ತಾಂತರ ಮಾಡಬೇಕೆಂದು ಬಿಜೆಪಿ ಒತ್ತಾಯಿಸುತ್ತಿರುವ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಸಿಬಿಐ ಕೇಂದ್ರ ಸರ್ಕಾರದ ಅಧೀನದಲ್ಲಿದ್ದು, ಅವರು ತನಿಖೆ ಮಾಡಿ ವರದಿ ಕೊಟ್ಟಿದ್ದಾರೆ. ಈಗ ಸರ್ವೋಚ್ಚ ನ್ಯಾಯಾಲಯಕ್ಕೆ ಹೋಗಬೇಕೆಂದು ಬಿಜೆಪಿ ಹೇಳುತ್ತಿದೆ.
ಸೌಜನ್ಯ ಪ್ರಕರಣದಲ್ಲಿ ವೀರೇಂದ್ರ ಹೆಗ್ಗಡೆಯವರ ಮೇಲೆ ಆರೋಪವಿದೆ. ಹಾಗಾದರೆ ಬಿಜೆಪಿ ಯಾರ ಪರ ಇದ್ದಾರೆ ಎಂದು ಪ್ರಶ್ನಿಸಿದರು. ಒಂದು ಕಡೆ ವೀರೇಂದ್ರ ಹೆಗಡೆಯವರ ಪರ ಎನ್ನುತ್ತಾರೆ ಮತ್ತೊಂದಡೆ ಸೌಜನ್ಯ ಪರ ಎನ್ನುತ್ತಾರೆ ಎಂದು ಹೇಳಿದರು. ಒಂದು ಕಡೆ ವೀರೇಂದ್ರ ಹೆಗ್ಗಡೆಯವರಿಗೆ ಜೈಕಾರ ಹಾಕುತ್ತಾರೆ ಮತ್ತೊಂದು ಕಡೆ ಸೌಜನ್ಯ ಪರ ಇರುವುದಾಗಿ ಹೇಳುತ್ತಾರೆ. ನಿಜವಾಗಿಯೂ ಇವರು ಯಾರ ಪರ ಇದ್ದಾರೆ ಎಂದು ಪ್ರಶ್ನಿಸಿದರು.
ಇನ್ನೂ ಚಿನ್ನಯ್ಯ ಎಂಬ ವ್ಯಕ್ತಿಯನ್ನು ಕರೆತಂದಿರುವುದೇ ಕಾಂಗ್ರೆಸ್ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಮಾತನಾಡಿ ಸದನದಲ್ಲಿ ಈ ಬಗ್ಗೆ ಚರ್ಚೆಯಾದಾಗ ಬೇರೆ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ಶಾಸಕ ಸುನೀಲ್ ಕುಮಾರ್, ಈಗ ಬೇರೆ ಹೇಳುತ್ತಿದ್ದಾರೆ ಎಂದು ತಿಳಿಸಿದ ಮುಖ್ಯಮಂತ್ರಿಗಳು ದಿನಕ್ಕೊಂದು ಹೇಳಿಕೆ ಕೊಡಬಾರದು. ಅಸತ್ಯದ ಮೇಲೆ ಚರ್ಚೆ ಮಾಡಿದರೆ ಹೀಗೆ ಆಗುವುದು ಎಂದರು.


