ಹಾಸನ: ದೊಡ್ಡವರ ಬಗ್ಗೆ ಮಾತನಾಡುವ ಶಕ್ತಿ ನನಗೆ ಇಲ್ಲ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹೇಳಿದ್ದಾರೆ. ಹಾಸನದಲ್ಲಿ ಜಿಲ್ಲಾ ಉಸ್ತುವಾರಿ ಬೇಡ ಎಂಬ ಸಚಿವ ಕೆ.ಎನ್.ರಾಜಣ್ಣ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ದೊಡ್ಡವರ ಬಗ್ಗೆ ಮಾತನಾಡುವ ಶಕ್ತಿ ನನಗೆ ಇಲ್ಲ. ಅವರೆಲ್ಲ ದೊಡ್ಡವರು ನಾವು ಮಾತನಾಡಲ್ಲ ಎಂದಿದ್ದಾರೆ.
ಇನ್ನೂ ದುದ್ದ ಪೊಲೀಸ್ ಠಾಣೆಯಲ್ಲಿ ಕತ್ಯವ್ಯದಲ್ಲಿದ್ದಾಗಲೇ ಪೊಲೀಸರು ಎಣ್ಣೆ ಹಾಕಿಕೊಂಡು ಬಂದು, ಕಂಪ್ಲೆಂಟ್ ಕೊಡಲು ಬಂದವರಿಗೆ ಬಾಯಿಗೆ ಬಂದಂತೆ ಮಾತಾಡುತ್ತಾರೆ. ಜಿಲ್ಲೆಯಲ್ಲಿ ಮಟ್ಕಾ, ಜೂಜು ದಂಧೆ ನಡೆಯುತ್ತಿದೆ.
ಗೌರವಸ್ಥ ಕುಟುಂಬಗಳು ಬದುಕಲು ಆಗುತ್ತಿಲ್ಲ. ಮದ್ಯ ಚಟದಿಂದ ಅವರ ಮನೆಯ ಹೆಣ್ಣುಮಕ್ಕಳ ಒಡವೆ ಮಾರಿಕೊಳ್ಳುತ್ತಿದ್ದಾರೆ. ಕೆಳಗಿನ ಅಧಿಕಾರಿಗಳ ಮೇಲೆ ಎಸ್ಪಿಯವರಿಗೆ ನಿಯಂತ್ರಣ ಇಲ್ಲದಂತಾಗಿದೆ. ಯುವಕರು ಎಲ್ಲೆಂದರಲ್ಲಿ ವ್ಹೀಲಿಂಗ್ ಮಾಡುತ್ತಿದ್ದಾರೆ. ಎಸ್ಪಿ ಇದರ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.