ಹೋಟೆಲ್‌ʼನವರಿಗೆ ಭಾರಿ ದುರಹಂಕಾರ ಬಂದಿದೆ ಎಂದು ವಾಟಾಳ್ ನಾಗರಾಜ್ ಹೇಳಿದ್ಯಾಕೆ..?

0
Spread the love

ಬೆಂಗಳೂರು: ಹೋಟೆಲ್‌ನವರಿಗೆ ಭಾರಿ ದುರಹಂಕಾರ ಬಂದಿದೆ ಎಂದು ಮಾಜಿ ಶಾಸಕ, ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ. ಕರ್ನಾಟಕ ಬಂದ್ ಕುರಿತು ಮಾತನಾಡಿದ ಅವರು, ನಮ್ಮ ಹೋರಾಟ ನಿರಂತರವಾಗಿರುತ್ತದೆ, ಇಲ್ಲಿಗೆ ನಿಲ್ಲೋದಿಲ್ಲ.

Advertisement

ಅನೇಕ ಪಿತೂರಿ ಮಾಡಿದರು. ನೈತಿಕತೆ ಬೆಂಬಲ ಅಂತ ಈಗ ಹುಟ್ಟಿದೆ. ನಮಗೆ ಈ ಬೆಂಬಲ ಬೇಡ. ಹೋಟೆಲ್‌ನವರಿಗೆ ಭಾರಿ ದುರಹಂಕಾರ ಬಂದಿದೆ. ಎಲ್ಲದೂ ಪೊಲೀಸ್ ಕೈಯಲ್ಲೇ ಇದೆ. ತೀರ ಹತ್ತಿಕ್ಕುವ ಮಟ್ಟಕ್ಕೆ ಹೋಗಬಾರದಿತ್ತು. ಆದರೂ ಬಂದ್ ಯಶಸ್ವಿ ಆಗಿದೆ ಎಂದರು.

ಇನ್ನೂ ನಮ್ಮವರನ್ನ ಬಂಧನ ಮಾಡಿದ್ದಾರೆ. ಬೆಂಗಳೂರು ಕಮಿಷನರ್ ಚಾಲೆಂಜ್ ತೆಗೆದುಕೊಂಡಿದ್ದಾರೆ. ಇವರು ವೈಯಕ್ತಿಕವಾಗಿ ತೆಗೆದುಕೊಂಡಿದ್ದಾರೆ. ಭಾಸ್ಕರ್ ರಾವ್ ರೀತಿ ಇವರು ರಾಜಕೀಯಕ್ಕೆ ಬರುತ್ತಾರೋ ಏನೋ ಗೊತ್ತಿಲ್ಲ.

ನನಗೂ ನೊಟೀಸ್ ಕೊಟ್ಟಿದ್ದಾರೆ. ಫ್ರೀಡಂ ಪಾರ್ಕ್‌ನಲ್ಲಿ ಮಾತ್ರ ಹೋರಾಟ ಮಾಡಿ ಅಂದಿದ್ದಾರೆ. ಟೌನ್ ಹಾಲ್‌ನಲ್ಲಿ ಪರ್ಮಿಷನ್ ಇಲ್ಲ ಅಂದಿದ್ದಾರೆ. ಬಂದ್ ಹತ್ತಿಕ್ಕೋ ಕೆಲಸ ಮಾಡಬಾರದಿತ್ತು. ನಾವು ಮಾಡಿರೋ ಹೋರಾಟದಲ್ಲಿ ಒಂದು ಹನಿ ನೀರು ಸಿಗದ ರೀತಿ ಆಗಬೇಕಿತ್ತು. ಆದರೂ ಯಶಸ್ಸು ಸಿಕ್ಕಿದೆ ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here