ಮೈಸೂರು: ಜನರ ತೆರಿಗೆ ದುಡ್ಡಲ್ಲಿ 2,000 ಕೊಟ್ಟು ನಾನೇ ಕೊಟ್ಟೆ ಅಂತ ಯಾಕೆ ಹೇಳ್ತೀರಾ? ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಜನರ ತೆರಿಗೆ ದುಡ್ಡಲ್ಲಿ 2 ಸಾವಿರ ಕೊಟ್ಟು ನಾನೇ ಕೊಟ್ಟೆ ನಾನೇ ಕೊಟ್ಟೆ ಅಂಥ ಯಾಕೆ ಹೇಳ್ತೀರಾ? ಅದರ ಕ್ರೆಡಿಟನ್ನು ತೆರಿಗೆದಾರರಿಗೆ ಯಾಕೆ ಕೊಡಲ್ಲ? ಸಿದ್ದರಾಮಯ್ಯನ ಹುಂಡಿಯಲ್ಲಿ ಚಿನ್ನದ ಅಲೂಗಡ್ಡೆ,
ಚಿನ್ನದ ಕಬ್ಬು ಬೆಳೆದು ಅದರಲ್ಲಿ ಬಂದ ದುಡ್ಡನ್ನ ಜನಕ್ಕೆ ಕೊಡುತ್ತೀದ್ದೀರಾ? ನನ್ನ ಹೆಂಡ್ತಿಗೂ, ಮಹಾದೇವಪ್ಪ ಹೆಂಡ್ತಿಗೂ ಫ್ರೀ ಅಂತೀರಲ್ಲ, ಆ ಫ್ರೀಗೆ ದುಡ್ಡು ಕೊಟ್ಟಿದ್ದು ಯಾರು? ಎಲ್ಲದಕ್ಕೂ ನಾನೇ ನಾನೇ ಕೊಟ್ಟಿದ್ದು ಅಂಥ ಯಾಕೆ ಕೊಚ್ಚಿ ಕೊಳ್ತೀರಾ ಎಂದು ಕಿಡಿಕಾರಿದ್ದಾರೆ.
ಯುದ್ಧ ಕ್ರೆಡಿಟ್ ಸೈನಿಕರಿಗೆ ಸಿಗಬೇಕು. ಆದರೆ, ಜನ ಮೋದಿಯಂಥ ಗಟ್ಟಿ ನಾಯಕತ್ವಕ್ಕೆ ಅದರ ಕ್ರೆಡಿಟ್ ಕೊಡ್ತಿದ್ದಾರೆ ಅಷ್ಟೇ. ಹಿಂದೆ ಇಂದಿರಾ ಗಾಂಧಿಗೂ ಕ್ರೆಡಿಟ್ ಕೊಡಲಿಲ್ವಾ? ಇಂದಿರಾ ಗಾಂಧಿ ಸಮಯದಲ್ಲಿ ಯುದ್ಧ ಸೋತಾಗ ಇಂದಿರಾ ಗಾಂಧಿನ ಬೈಯಲಿಲ್ವಾ? ಇದೆಲ್ಲಾ ಜನ ಕೊಡುವ ಕ್ರೆಡಿಟ್‌ಗಳು. ಜನ ಮೋದಿಗೆ ಕ್ರೆಡಿಟ್ ಕೊಟ್ಟರೆ ನಿಮಗೆ ಯಾಕೆ ಹೊಟ್ಟೆ ಉರಿ ಎಂದು ಕಾಂಗ್ರೆಸ್ ನಾಯಕರನ್ನು ತರಾಟೆಗೆ ತೆಗೆದುಕೊಂಡರು.