ಮೈಸೂರು: ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಏಕೆ ರಾಜೀನಾಮೆ ನೀಡಬೇಕು ಎಂದುಜೆಡಿಎಸ್ ಶಾಸಕ ಜಿಟಿ ದೇವೇಗೌಡ ಸಿದ್ದರಾಮಯ್ಯ ಪರವಾಗಿ ಬ್ಯಾಟಿಂಗ್ ಮಾಡಿದರು. ಮೈಸೂರು ದಸರಾ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಅವರು, ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಏಕೆ ರಾಜೀನಾಮೆ ನೀಡಬೇಕು ಎಂದು ಪ್ರಶ್ನಿಸಿದರು. ಹಾಗಾದರೆ ಎಚ್‌ಡಿ ಕುಮಾರಸ್ವಾಮಿ ರಾಜೀನಾಮೆ ಕೊಡ್ತಾರಾ? ಎಂದು ಜೆಡಿಎಸ್ ನಾಯಕರ ವಿರುದ್ದನೇ ಹರಿಹಾಯ್ದರು.
Advertisement
ಸಿದ್ದರಾಮಯ್ಯನವರು ಚಾಮುಂಡೇಶ್ವರಿ ತಾಯಿಯ ವರಪುತ್ರರು ಹೌದು. ಚಾಮುಂಡೇಶ್ವರಿ ಕ್ಷೇತ್ರಕ್ಕೆ ಕಾಲಿಟ್ಟ ವೇಳೆಯಿಂದಲೂ ಸಿದ್ದರಾಮಯ್ಯ ಸಚಿವರಾಗಿ, ಡಿಸಿಎಂ ಆಗಿ, ಎರಡು ಬಾರಿ ಸಿಎಂ ಆಗಿದ್ದಾರೆ, ಎಂದರೆ ತಾಯಿ ಚಾಮುಂಡೇಶ್ವರಿ ಆಶೀರ್ವಾದ ಇದಕ್ಕೆ ಕಾರಣ. ಎಂತಹ ಸಂದರ್ಭದಲ್ಲಿಯೂ ತಾಯಿ ಚಾಮುಂಡೇಶ್ವರಿ ಅವರ ಪಾಲಿಗೆ ಇದ್ದಾರೆ ಎಂದರು.