ಬಳ್ಳಾರಿ: ನಟ ದರ್ಶನ್ ಅವರಿಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಸದ್ಯ ಈ ಸಂಬಂಧ ದರ್ಶನ್ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ದರ್ಶನ್ ಪತ್ನಿ ವಿಜಯಲಕ್ಷ್ಮೀ ಬಳ್ಳಾರಿಯ ಕನಕ ದುರ್ಗಮ್ಮ ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ.
Advertisement
ಅದಷ್ಟೇ ಅಲ್ಲ, ದುರ್ಗಮ್ಮ ದೇವಸ್ಥಾನದಲ್ಲಿ ನಟನ ಫ್ಯಾನ್ಸ್ ನೂರಾರು ತುಪ್ಪದ ದೀಪಗಳನ್ನು ಬೆಳಗಿಸಿ ದೇವಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ಮೂಲಕ ದರ್ಶನ್‌ಗೆ ಬೇಲ್ ಸಿಕ್ಕಿದ್ದಕ್ಕೆ ಸಂಭ್ರಮಿಸಿದ್ದಾರೆ.ನಟ ದರ್ಶನ್‌ಗೆ ಜಾಮೀನು ಮಂಜೂರು ಆಗಿದೆ ಎಂಬ ವಿಷಯ ತಿಳಿಯುತ್ತಿದ್ದಂತೆ ನಮ್ ಬಾಸ್‌ಗೆ ಜಾಮೀನು ಸಿಕ್ಕಾಯ್ತು ಕಣ್ರೋ ಎಂದು ಅಭಿಮಾನಿಗಳು ಫುಲ್ ಜೋರಾಗೇ ಹಬ್ಬ ಶುರು ಹಚ್ಚಿಕೊಂಡಿದ್ದಾರೆ.