ಬೆಂಗಳೂರು: ದರ್ಶನ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲು ಪಾಲಾಗಿದ್ದ ದರ್ಶನ್ಗೆ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಇದರ ಬೆನ್ನಲ್ಲೇ ಕಾಮಾಕ್ಯ ದೇವಿಗೆ ಪತ್ನಿ ವಿಜಯಲಕ್ಷ್ಮಿ ಧನ್ಯವಾದ ತಿಳಿಸಿದ್ದಾರೆ.
Advertisement
ಪತಿಗೆ ಜಾಮೀನು ಸಿಗುತ್ತಿದ್ದಂತೆ ಕಾಮಾಕ್ಯ ದೇವಸ್ಥಾನದ ಫೋಟೋ ಶೇರ್ ಮಾಡಿ ಥ್ಯಾಂಕ್‌ಫುಲ್, ಗ್ರೇಟ್‌ಫುಲ್, ಬ್ಲೆಸ್ಡ್ ಎಂದು ವಿಜಯಲಕ್ಷ್ಮಿ ಸಂತಸ ವ್ಯಕ್ತಪಡಿಸಿದ್ದಾರೆ. ದರ್ಶನ್ ಆದಷ್ಟು ಬೇಗ ಬಿಡುಗಡೆ ಆಗಲಿ ಎಂದು ಇತ್ತೀಚೆಗೆ ಕಾಮಾಕ್ಯ ದೇವಸ್ಥಾನಕ್ಕೆ ವಿಜಯಲಕ್ಷ್ಮಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು.
ಅಂದಹಾಗೆ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ದರ್ಶನ್‌ರನ್ನು ಜೂನ್ 11ರಂದು ಬಂಧಿಸಿದ್ದು, ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ದರ್ಶನ್ ವೈದ್ಯಕೀಯ ವರದಿಯನ್ನು ಪರಿಶೀಲಿಸಿದ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದೆ.