ಮಡಿಕೇರಿ:- ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಮಹಿಳೆ ಬಲಿಯಾಗಿರುವ ಘಟನೆ ಇಲ್ಲಿನ ಚನ್ನಂಗೊಲ್ಲಿ ಗ್ರಾಮದಲ್ಲಿ ಜರುಗಿದೆ.
Advertisement
ಚನ್ನಂಗೊಲ್ಲಿ ಗ್ರಾಮದ ಪೈಸಾರಿ ನಿವಾಸಿ 52 ವರ್ಷದ ಜಾನಕಿ ಮೃತ ಮಹಿಳೆ. ಚನ್ನಂಗೊಲ್ಲಿ ಗ್ರಾಮದ ಬಳಿಯ ಕಾಫಿ ತೋಟವೊಂದರಲ್ಲಿ ಕಾರ್ಯನಿರ್ವಹಿಸಿ ಸಂಜೆ ಮನೆಗೆ ಮರಳುವ ಸಂದರ್ಭದಲ್ಲಿ ಮಹಿಳೆ ಮೇಳೆ ಕಾಡಾನೆ ದಿಢೀರ್ ದಾಳಿ ಮಾಡಿದೆ. ಗಂಭೀರ ಸ್ವರೂಪದಲ್ಲಿ ಗಾಯಗೊಂಡ ಜಾನಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇನ್ನೂ ಕೊಡಗು ಜಿಲ್ಲೆಯಲ್ಲಿ ಆನೆ ಮಾನವ ಸಂಘರ್ಷಕ್ಕೆ ಕೊನೆಯೇ ಇಲ್ಲದಂತೆ ಅಗಿದೆ. ನಿತ್ಯ ಒಂದಲ್ಲ ಒಂದು ರೀತಿಯಲ್ಲಿ ವನ್ಯಜೀವಿಗಳ ಹಾವಳಿಯಿಂದ ತತ್ತರಿಸಿರುವ ಕೊಡಗು ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕಾಡಾನೆಗಳ ಸಮಸ್ಯೆ ದಿನ ಕಳೆದಂತೆ ಹೆಚ್ಚಾಗುತ್ತಿದೆ. ಈ ನಡುವೆ ದಕ್ಷಿಣ ಕೊಡಗಿನಲ್ಲಿ ಕಾಡಾನೆಗಳ ಹಾವಳಿ ತಾರಕಕ್ಕೇರಿದೆ.