ಚಿಕ್ಕಮಗಳೂರು:- ಕಾಡಾನೆ ದಾಳಿಗೆ ಕಾಫಿ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದ ಮಹಿಳೆ ಸಾವನ್ನಪ್ಪಿರುವ ಘಟನೆ ಎನ್.ಆರ್ ಪುರ ತಾಲೂಕಿನ ಬನ್ನೂರು ಬಳಿ ಜರುಗಿದೆ.
Advertisement
ಅನಿತಾ (25) ಮೃತ ಮಹಿಳೆ. ಇವರು ದಾವಣಗೆರೆಯ ಹೊನ್ನಾಳಿ ಮೂಲದವರು ಎನ್ನಲಾಗಿದೆ. ಅವರು ಕಾಫಿ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದರು. ಕೆಲಸ ಮುಗಿಸಿ ರಾತ್ರಿ 9 ಗಂಟೆಗೆ ಮನೆಗೆ ವಾಪಸ್ ಆಗುವಾಗ ಆನೆ ದಾಳಿ ಮಾಡಿದೆ.
ತೀವ್ರವಾಗಿ ಗಾಯಗೊಂಡಿದ್ದ ಮಹಿಳೆಯನ್ನು ಬಾಳೆಹೊನ್ನೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.