HomeKarnataka Newsಚಿಕ್ಕಮಗಳೂರು–ಬೇಲೂರು ಗಡಿ ಭಾಗದಲ್ಲಿ ಕಾಡಾನೆಗಳ ಆತಂಕ: ಹಿಂಡು ಹಿಂಡಾಗಿ ಲಗ್ಗೆ ಇಟ್ಟ ‘ಬೀಟಮ್ಮ’ ಗ್ಯಾಂಗ್!

ಚಿಕ್ಕಮಗಳೂರು–ಬೇಲೂರು ಗಡಿ ಭಾಗದಲ್ಲಿ ಕಾಡಾನೆಗಳ ಆತಂಕ: ಹಿಂಡು ಹಿಂಡಾಗಿ ಲಗ್ಗೆ ಇಟ್ಟ ‘ಬೀಟಮ್ಮ’ ಗ್ಯಾಂಗ್!

For Dai;y Updates Join Our whatsapp Group

Spread the love

ಚಿಕ್ಕಮಗಳೂರು: ಹಾಸನ ಜಿಲ್ಲೆಯ ಬೇಲೂರು ಮತ್ತು ಸಕಲೇಶಪುರ ಭಾಗದಿಂದ ಚಿಕ್ಕಮಗಳೂರು ಜಿಲ್ಲೆಗೆ ಕಾಡಾನೆಗಳ ದೊಡ್ಡ ಗುಂಪು ಪ್ರವೇಶಿಸಿದ್ದು, ಜನರಲ್ಲಿ ಭೀತಿ ಮೂಡಿಸಿದೆ.

‘ಬೀಟಮ್ಮ’ ಮತ್ತು ‘ಭುವನೇಶ್ವರಿ’ ಗ್ಯಾಂಗ್‌ಗಳಾಗಿ ಗುರುತಿಸಲ್ಪಟ್ಟಿರುವ ಈ ಕಾಡಾನೆಗಳು ಬೇಲೂರು ಮಾರ್ಗದಿಂದ ಜಿಲ್ಲೆಗೆ ಪ್ರವೇಶಿಸಿ, ಭೀಮಾ ನೇತೃತ್ವದಲ್ಲಿ ಸುಮಾರು 25 ಕಾಡಾನೆಗಳು ಚಿಕ್ಕಮಗಳೂರು ಕಡೆಗೆ ಬಂದಿವೆ. ಒಟ್ಟಾರೆ 45 ಕಾಡಾನೆಗಳಿದ್ದ ಬೀಟಮ್ಮ ಗ್ಯಾಂಗ್ ನಂತರ 20 ಕಾಡಾನೆಗಳೊಂದಿಗೆ ಬೇಲೂರು ಕಡೆಗೆ ಹಿಂತಿರುಗಿದ್ದರೂ, ಮೂಡಿಗೆರೆ–ಬೇಲೂರು ಗಡಿಯ ತೋಟ ಪ್ರದೇಶಗಳಲ್ಲಿ ಇನ್ನೂ 20 ಕಾಡಾನೆಗಳು ಬೀಡುಬಿಟ್ಟಿರುವುದರಿಂದ ಆತಂಕ ಮುಂದುವರಿದಿದೆ.

ಮೂಡಿಗೆರೆ ತಾಲ್ಲೂಕಿನ ಗೋಣಿಬೀಡು ಹೋಬಳಿ ವ್ಯಾಪ್ತಿಯಲ್ಲಿ 22 ಕಾಡಾನೆಗಳು ಸಂಚರಿಸುತ್ತಿದ್ದು, ಕಸ್ಕೆಬೈಲು ಗುಡ್ಡದಲ್ಲಿ ತಂಗಿರುವುದು ಕಂಡುಬಂದಿದೆ. ಬಾರದಹಳ್ಳಿ, ಚಟ್ಟನಹಳ್ಳಿ, ಕಲ್ಲು ಗುಡ್ಡ, ವಾಟೆಗಂಡಿ, ಹುಲಿಹಂಡ್ಲು ಸೇರಿದಂತೆ ಹಲವಾರು ಗ್ರಾಮಗಳಲ್ಲಿ ಕಾಡಾನೆಗಳ ಸಂಚಾರ ಹೆಚ್ಚಾಗಿದೆ. ಚಿಕ್ಕಮಗಳೂರು ನಗರ ಸುತ್ತಮುತ್ತಲೂ ಎರಡು ಕಾಡಾನೆಗಳು ಕಾಣಿಸಿಕೊಂಡಿದ್ದು, ಸ್ಥಳೀಯರು ರಾತ್ರಿ ವೇಳೆ ಹೊರಗೆ ಹೋಗಲು ಹೆದರುತ್ತಿದ್ದಾರೆ. ಈ ನಡುವೆ, ಕಾಡಾನೆ ದಾಳಿಗಳಿಂದ ಒಂದೇ ವಾರದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಅರಣ್ಯ ಇಲಾಖೆ ಹೈ ಅಲರ್ಟ್ ಘೋಷಿಸಿ, ಕಾರ್ಮಿಕರಿಗೆ ತೋಟಗಳಿಗೆ ತೆರಳದಂತೆ ತಾತ್ಕಾಲಿಕ ಸೂಚನೆ ನೀಡಿದೆ. ಜನರಿಗೆ ಎಚ್ಚರಿಕೆಯಿಂದ ಗುಂಪುಗಳಲ್ಲಿ ಸಂಚರಿಸಲು, ಕಾಡಾನೆ ಕಂಡುಬಂದರೆ ತಕ್ಷಣ ಅಧಿಕಾರಿಗಳಿಗೆ ಮಾಹಿತಿ ನೀಡಲು ಮನವಿ ಮಾಡಲಾಗಿದೆ. ಕಾಫಿನಾಡಿನಲ್ಲಿ ಮರುಕಳಿಸುತ್ತಿರುವ ಕಾಡಾನೆಗಳ ಹಾವಳಿ ರೈತರು ಹಾಗೂ ತೋಟಗಾರರಿಗೆ ತಲೆನೋವಾಗಿದ್ದು, ಶಾಶ್ವತ ಪರಿಹಾರಕ್ಕಾಗಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯ ಮಾಡಲಾಗಿದೆ. ಚಿಕ್ಕಮಗಳೂರು ತಾಲ್ಲೂಕಿನ ಒಟ್ಟು 12 ಗ್ರಾಮಗಳಲ್ಲಿ ಈಗಾಗಲೇ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!