CP ಯೋಗೇಶ್ವರ್ ಕಾಂಗ್ರೆಸ್ ಪಕ್ಷ ಸೇರ್ತಾರಾ!?: CM ಸಿದ್ದರಾಮಯ್ಯ ಹೇಳಿದಿಷ್ಚು!

0
Spread the love

ಮೈಸೂರು:- ಚನ್ನಪಟ್ಟಣ ಉಪಚುನಾವಣೆಯ ಟಿಕೆಟ್ ಕಗ್ಗಂಟು ಹಿನ್ನೆಲೆ ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆ, CP ಯೋಗೇಶ್ವರ್ ಕಾಂಗ್ರೆಸ್ ಸೇರಲಿದ್ದಾರೆ ಎಂಬ ವಿಚಾರದ ಬಗ್ಗೆ CM ಸಿದ್ದರಾಮಯ್ಯ ಪ್ರತಿಕ್ರಿಯೆ ಕೊಟ್ಟಿದ್ದಾರೆ.

Advertisement

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸಿದ್ಧಾಂತ ಒಪ್ಪಿ ಯಾರೇ ಪಕ್ಷಕ್ಕೆ ಬಂದರೂ ಸ್ವಾಗತ. ಚನ್ನಪಟ್ಟಣ ಕ್ಷೇತ್ರಕ್ಕೆ ಡಿಕೆ ಸುರೇಶ್ ಹೆಸರು ಕೂಡ ಇದೆ. ನಮ್ಮ ಪಕ್ಷದ ಅಧ್ಯಕ್ಷರೇ ಅಲ್ಲಿ ಇರುವ ಕಾರಣ ಅವರೇ ಸೂಕ್ತ ಅಭ್ಯರ್ಥಿ ತೀರ್ಮಾನ ಮಾಡುತ್ತಾರೆ. ಒಳ್ಳೆಯ ಅಭ್ಯರ್ಥಿ ಹಾಕಬೇಕು ಎಂದು ಹೇಳಿದ್ದೇನೆ ಎಂದರು.

ಸಂಡೂರಿನಿಂದ ತುಕಾರಾಮ್ ಪತ್ನಿಗೆ ಟಿಕೆಟ್ ನೀಡುತ್ತೇವೆ. ಇಂದು ಚನ್ನಪಟ್ಟಣ ಮತ್ತು ಶಿಗ್ಗಾಂವಿ ಟಿಕೆಟ್ ವಿಚಾರ ತೀರ್ಮಾನ ಆಗುತ್ತೆ. ಸಂಜೆ ವೇಳೆಗೆ ಮೂರು ಕ್ಷೇತ್ರಗಳ ಟಿಕೆಟ್ ಘೋಷಣೆ ಆಗುತ್ತದೆ ಎಂದು ತಿಳಿಸಿದರು.


Spread the love

LEAVE A REPLY

Please enter your comment!
Please enter your name here