ಇನ್ಮುಂದೆ ಯಾವುದೇ ರೀತಿಯ ಚುನಾವಣೆಗೆ ಸ್ಪರ್ಧಿಸಲ್ಲ: ಗೀತಾ ಶಿವರಾಜ್ ಕುಮಾರ್

0
Spread the love

ಶಿವಮೊಗ್ಗ: ಇನ್ಮುಂದೆ ಯಾವುದೇ ರೀತಿಯ ಚುನಾವಣೆಗೆ ಸ್ಪರ್ಧಿಸಲ್ಲ ಎಂದು ಗೀತಾ ಶಿವರಾಜ್ ಕುಮಾರ್ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಚುನಾವಣೆಗೆ ಸ್ಪರ್ಧಿಸಲ್ಲ, ಆದರೆ ನಿಮ್ಮೆಲ್ಲರ ಜೊತೆಗೆ ನಿಂತಿರುತ್ತೇನೆ. ಮುಂದಿನ ಚುನಾವಣೆಗೆ ಬಂದು ಕ್ಯಾಂಪೇನ್ ಮಾಡುತ್ತೇನೆ. ಚುನಾವಣೆಯಲ್ಲಿ ಸ್ಪರ್ಧಿಸಿ ಮಂಜುನಾಥ ಭಂಡಾರಿಗೂ ನಾನು ತೊಂದರೆ ಕೊಡುವುದಿಲ್ಲ ಎಂದರು.

Advertisement

ಮಹಿಳೆಯರು ಎಂದಿಗೂ ಅಬಲೆಯರಲ್ಲ, ಎಲ್ಲರೂ ಸಬಲೆಯರೇ. ಮಹಿಳೆಯರಿಗೆ ಶಕ್ತಿ ನೀಡಿದರೆ ಎಂತಹ ಕೆಲಸವನ್ನಾದರೂ ಮಾಡುತ್ತಾರೆ. ಕಳೆದ ಹತ್ತು ವರ್ಷಗಳಿಂದ ಶ್ವೇತಾ ಬಂಡಿಯನ್ನು ನಾನು ಬಲ್ಲೆ. ನಿಮ್ಮ ಕಷ್ಟಗಳಿಗೆ ನಾನು ಸ್ಪಂದಿಸುತ್ತೇನೆ. ಏನೇ ಕಷ್ಟವಿದ್ದರೂ ಮಧು ಬಂಗಾರಪ್ಪ ಹಿಡಿದುಕೊಂಡು ಕೆಲಸ ಮಾಡಿಸಿಕೊಳ್ಳಿ ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here