ನವದೆಹಲಿ: ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಜನ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಘೋಷಿಸಿದ್ದಾರೆ. ಪಿಟಿಐ ಸಂದರ್ಶನದಲ್ಲಿ ಮಾತನಾಡಿರುವ ಅವರು, ನಾನು ಈ ಬಾರಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಬಾರದು ಎಂದು ಪಕ್ಷ ನಿರ್ಧರಿಸಿದೆ.
ಈ ಹಿನ್ನೆಲೆಯಲ್ಲಿ ರಾಘೋಪುರ್ನಿಂದ ತೇಜಸ್ವಿ ಯಾದವ್ ವಿರುದ್ಧವಾಗಿ ಪಕ್ಷದಿಂದ ಬೇರೆ ಅಭ್ಯರ್ಥಿಯನ್ನು ಘೋಷಿಸಿದೆ. ಪಕ್ಷದ ಹಿತಾಸಕ್ತಿ ಹಿನ್ನೆಲೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಒಂದು ವೇಳೆ ನಾನು ಸ್ಪರ್ಧಿಸಿದರೆ, ಇದರಿಂದ ಪಕ್ಷದ ಅಗತ್ಯ ಸಂಘಟನಾ ಕೆಲಸದಿಂದ ದೂರವಾದಂತೆ ಆಗುತ್ತದೆ ಎಂದರು.
243 ಸದಸ್ಯ ಬಲದ ವಿಧಾನಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಗೆಲುವಿನ ಗುರಿಯ ಬಗ್ಗೆ ಮಾತನಾಡಿದ ಅವರು, 150ಕ್ಕಿಂತ ಕಡಿಮೆ ಸ್ಥಾನಗಳನ್ನು ಗೆದ್ದರೆ ಅದು ತಮಗೆ ವೈಯಕ್ತಿಕ ಸೋಲು ಎಂದು ಅಭಿಪ್ರಾಯಪಟ್ಟಿದ್ದಾರೆ. ಜನ ಸುರಾಜ್ ಪಕ್ಷವು 150ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದರೆ, ಅದು ಬಿಹಾರದ ಜನರ ನಿಜವಾದ ಗೆಲುವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.