ಬೆಂಗಳೂರು:- ಪ್ರಸಕ್ತ ರಾಜಕೀಯ ಬೆಳವಣಿಗೆ ಬಗ್ಗೆ ಸದ್ಯಕ್ಕೆ ನಾನು ಮಾತನಾಡಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಪುನಃ ಅಧಿಕಾರಕ್ಕೆ ತರುವುದೇ ಮುಖ್ಯ ಉದ್ದೇಶ. ಈಗಿನ ರಾಜಕೀಯ ಬೆಳವಣಿಗೆಯ ಬಗ್ಗೆ ಮಾತನಾಡುವುದಿಲ್ಲ, ಎಲ್ಲಾ ವಿಚಾರಗಳನ್ನು ಹೈಕಮಾಂಡ್ ನೋಡಿಕೊಳ್ಳುತ್ತಿದ್ದು, ಎಲ್ಲರ ಉದ್ದೇಶ ಒಂದೇ ಎಂದರು.
ನವೆಂಬರ್ 28ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಆಹ್ವಾನಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಎಲ್‌ಕೆಜಿ-ಯುಕೆಜಿ ತರಗತಿಯ ಆರಂಭ, ಗೃಹಲಕ್ಷ್ಮೀ ವಿವಿಧೋದ್ದೇಶ ಸಹಕಾರ ಸಂಘ ಉದ್ಘಾಟನೆ, ಅಕ್ಕಪಡೆಗೆ ಚಾಲನೆ ಸೇರಿದಂತೆ ಹಲವು ಕಾರ್ಯಕ್ರಮಗಳು ನಡೆಯಲಿವೆ.
ಪ್ರಮುಖ ಅತಿಥಿಗಳಾಗಿ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗಿಯಾಗಲಿದ್ದಾರೆ. ರಾಹುಲ್ ಗಾಂಧಿ ಸೇರಿದಂತೆ ಇನ್ನಿತರ ರಾಷ್ಟ್ರೀಯ ನಾಯಕರ ಆಗಮನವು ಖಚಿತವಾಗಬೇಕಿದೆ ಎಂದು ತಿಳಿಸಿದ್ದಾರೆ.



