HomeSports Newsಭಾರತ-ಇಂಗ್ಲೆಂಡ್ 2ನೇ ಟಿ20ಗೆ ಮಳೆ ಅಡ್ಡಿಯಾಗುತ್ತಾ? ಮ್ಯಾಂಚೆಸ್ಟರ್ ಹವಾಮಾನ ವರದಿ ಏನು ಹೇಳುತ್ತೆ?

ಭಾರತ-ಇಂಗ್ಲೆಂಡ್ 2ನೇ ಟಿ20ಗೆ ಮಳೆ ಅಡ್ಡಿಯಾಗುತ್ತಾ? ಮ್ಯಾಂಚೆಸ್ಟರ್ ಹವಾಮಾನ ವರದಿ ಏನು ಹೇಳುತ್ತೆ?

For Dai;y Updates Join Our whatsapp Group

ಮ್ಯಾಂಚೆಸ್ಟರ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ಮೊದಲ ಟಿ20 ಪಂದ್ಯ ಮಳೆಯಿಂದಾಗಿ ಫಲಿತಾಂಶವಿಲ್ಲದೆ ಅಂತ್ಯಗೊಂಡಿದ್ದರಿಂದ, ಇದೀಗ ಮ್ಯಾಂಚೆಸ್ಟರ್‌ನಲ್ಲಿ ನಡೆಯಲಿರುವ ಎರಡನೇ ಪಂದ್ಯಕ್ಕೂ ಮಳೆ ಅಡ್ಡಿಯಾಗುವ ಸಾಧ್ಯತೆ ಇದೆಯೇ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ.

ಚೆಸ್ಟರ್-ಲೆ-ಸ್ಟ್ರೀಟ್‌ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ ಮೊದಲು ಬ್ಯಾಟಿಂಗ್ ಮಾಡಿ 189 ರನ್‌ಗಳ ಸವಾಲಿನ ಮೊತ್ತ ಕಲೆಹಾಕಿತ್ತು. ಆದರೆ ಇಂಗ್ಲೆಂಡ್‌ ತಂಡ ಗುರಿ ಬೆನ್ನಟ್ಟುವ ಮುನ್ನವೇ ಮಳೆ ಸುರಿದ ಪರಿಣಾಮ ಪಂದ್ಯವನ್ನು ರದ್ದುಗೊಳಿಸಲಾಗಿತ್ತು.

ಮ್ಯಾಂಚೆಸ್ಟರ್‌ನಲ್ಲಿ ಹವಾಮಾನ ಹೇಗಿರಲಿದೆ?

ಹವಾಮಾನ ಮುನ್ಸೂಚನೆಯ ಪ್ರಕಾರ, ಪಂದ್ಯದ ದಿನ ಮ್ಯಾಂಚೆಸ್ಟರ್‌ನಲ್ಲಿ ದಿನವಿಡೀ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ 21 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ನಿರೀಕ್ಷೆಯಿದೆ.

ಟಾಸ್‌ಗೆ ಮುನ್ನ ತುಂತುರು ಮಳೆಯ ಸಾಧ್ಯತೆ ಇದ್ದರೂ, ಪಂದ್ಯದ ವೇಳೆಯಲ್ಲಿ ಮಳೆಯಾಗುವ ಸಾಧ್ಯತೆ ತುಂಬಾ ಕಡಿಮೆ ಎಂದು ವರದಿಯಾಗಿದೆ. ಸ್ಥಳೀಯ ಸಮಯ ಮಧ್ಯಾಹ್ನ 1ರಿಂದ ಸಂಜೆ 6 ಗಂಟೆಯವರೆಗೆ ಮಳೆಯ ಸಾಧ್ಯತೆ ಶೇಕಡಾ 24ರಿಂದ ಶೇಕಡಾ 13ಕ್ಕೆ ಇಳಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.

ಆದರೆ ಪಂದ್ಯ ಅಂತ್ಯದ ವೇಳೆಗೆ, ಅಂದರೆ ಸ್ಥಳೀಯ ಸಮಯ ಸಂಜೆ 7 ಗಂಟೆಯ ಸುಮಾರಿಗೆ ಮಳೆಯಾಗುವ ಸಾಧ್ಯತೆ ಇರುವುದರಿಂದ, ಕೊನೆಯ ಹಂತದಲ್ಲಿ ಸ್ವಲ್ಪ ವ್ಯತ್ಯಯ ಉಂಟಾಗುವ ಸಾಧ್ಯತೆಯನ್ನು ತಳ್ಳಿಹಾಕಲು ಸಾಧ್ಯವಿಲ್ಲ. ಮೋಡ ಕವಿದ ವಾತಾವರಣದಿಂದ ಆಟಗಾರರಿಗೆ ತೀವ್ರ ಬಿಸಿಲಿನ ತಾಪದ ಸಮಸ್ಯೆ ಎದುರಾಗುವ ಸಾಧ್ಯತೆ ಕಡಿಮೆಯಿದೆ.

ಮ್ಯಾಂಚೆಸ್ಟರ್‌ನಲ್ಲಿ ಉಭಯ ತಂಡಗಳ ಮುಖಾಮುಖಿ ದಾಖಲೆ

ಮ್ಯಾಂಚೆಸ್ಟರ್ ಮೈದಾನದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಇದುವರೆಗೆ ಎರಡು ಟಿ20 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಮೊದಲ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ಆರು ವಿಕೆಟ್‌ಗಳ ಗೆಲುವು ಸಾಧಿಸಿತ್ತು.

ಆದರೆ ಎರಡನೇ ಮುಖಾಮುಖಿಯಲ್ಲಿ ಭಾರತ ಎಂಟು ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿತ್ತು. ಆ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಇಂಗ್ಲೆಂಡ್ 159 ರನ್‌ಗಳಿಗೆ ಸೀಮಿತವಾಗಿತ್ತು. ಗುರಿ ಬೆನ್ನಟ್ಟಿದ ಭಾರತಕ್ಕೆ ಕನ್ನಡಿಗ ಕೆ.ಎಲ್. ರಾಹುಲ್ ಅಜೇಯ ಶತಕ ಸಿಡಿಸಿ ಗೆಲುವಿನ ರೂವಾರಿ ಆಗಿದ್ದರು. ರಾಹುಲ್ ಕೇವಲ 54 ಎಸೆತಗಳಲ್ಲಿ 101 ರನ್‌ಗಳ ಅಜೇಯ ಇನ್ನಿಂಗ್ಸ್‌ ಆಡಿ ಭಾರತವನ್ನು ಸುಲಭವಾಗಿ ಗೆಲುವಿನ ದಡ ಸೇರಿಸಿದ್ದರು.

ಮೊದಲ ಪಂದ್ಯ ಮಳೆಯಿಂದ ರದ್ದಾದ ಹಿನ್ನೆಲೆಯಲ್ಲಿ ಸರಣಿಯಲ್ಲಿ ಮುನ್ನಡೆ ಸಾಧಿಸುವ ದೃಷ್ಟಿಯಿಂದ ಎರಡೂ ತಂಡಗಳಿಗೆ ಈ ಪಂದ್ಯ ಅತ್ಯಂತ ಮಹತ್ವದ್ದಾಗಿದೆ. ಹೀಗಾಗಿ ಮಳೆ ಅಡ್ಡಿಯಾಗದಿದ್ದರೆ ಅಭಿಮಾನಿಗಳಿಗೆ ರೋಚಕ ಹಣಾಹಣಿ ಕಣ್ತುಂಬಿಕೊಳ್ಳುವ ಅವಕಾಶ ಸಿಗಲಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img