ಬೆಂಗಳೂರು: ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಮಾಡಿದ್ರೆ ಅದು ಅಭಿವೃದ್ಧಿ ಆಗುತ್ತಾ? ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಮಾಡಲು ಅಡ್ಡ ಹಾಕಿದ್ದು ಕುಮಾರಸ್ವಾಮಿ ಎಂಬ ಡಿಕೆಶಿ ಹೇಳಿಕೆಗೆ ನಗರದಲ್ಲಿ ಮಾತನಾಡಿದ ಅವರು,
ಕುಮಾರಸ್ವಾಮಿಯವರು ಕೇಂದ್ರದ ಮೇಲೆ ಒತ್ತಡ ಹಾಕಿದ್ದಾರೆ ಅನ್ನೋದಕ್ಕೆ ಏನಾದರೂ ಸಾಕ್ಷಿ ಇದೆಯಾ ಇವರ ಹತ್ರ?ಕೈಲಾಗದೇ ಇರೋರು, ಕುಣಿಯೋದಕ್ಕೆ ಆಗದೇ ಇರೋರು ನೆಲ ಡೊಂಕು ಅಂದರು ಎಂದ ಹಾಗೆ ಆಗುತ್ತೆ. ರಾಮನಗರ ಜಿಲ್ಲೆಯ ಅಸ್ಮಿತೆ ಕಾಪಾಡಬೇಕು ಅನ್ನೋದು ಜಿಲ್ಲೆಯ ಜನರ ಬಯಕೆ. ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಮಾಡಿದ್ರೆ ಅದು ಅಭಿವೃದ್ಧಿ ಆಗುತ್ತಾ? ಎಂದು ಪ್ರಶ್ನಿಸಿದರು.
ಕುಮಾರಸ್ವಾಮಿ ವಿರುದ್ಧ ಡಿಕೆಶಿ ಏಕವಚನ ಪ್ರಯೋಗ ಮಾಡ್ತಿದ್ದಾರೆ. ಅವರು ಮಾತಾಡಲಿ, ರಾಜ್ಯದ ಜನ ಇದೆಲ್ಲವನ್ನೂ ನೋಡ್ತಿದ್ದಾರೆ. ಇವತ್ತಿಂದ ಅಲ್ಲ ಬಹಳ ದಿನಗಳಿಂದ ಏಕವಚನದಲ್ಲಿ ಮಾತಾಡ್ತಿದ್ದಾರೆ. ಕುಮಾರಸ್ವಾಮಿ ಮಾತ್ರ ಅಲ್ಲ ಎಲ್ಲರಿಗೂ ಅವರು ಹಾಗೇ ಮಾತಾಡ್ತಾರೆ ಎಂದು ಕಿಡಿಕಾರಿದರು.