ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಸ್ಟಿಂಗ್ ಆಪರೇಷನ್ ವಿವಾದದ ಪರಿಣಾಮ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆ ಅನುಭವಿಸಿದೆ. ಹಿರಿಯ ಕಾಂಗ್ರೆಸ್ ನಾಯಕ ಕೆ.ಎನ್. ರಾಜಣ್ಣ ಕೂಡ ಈ ಬಗ್ಗೆ ಭವಿಷ್ಯ ನುಡಿದಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.
ಸಿದ್ದರಾಮಯ್ಯ ಅವರ ಬೆಂಬಲಿಗರು ಹಾಗೂ ಮತದಾರರು ಕೂಡ ಕಾಂಗ್ರೆಸ್ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಈ ಅಸಮಾಧಾನ 2028ರ ವಿಧಾನಸಭಾ ಚುನಾವಣೆಯಲ್ಲೂ ಪ್ರತಿಫಲಿಸಲಿದೆ ಎಂದು ಅಶೋಕ್ ಅಭಿಪ್ರಾಯಪಟ್ಟಿದ್ದಾರೆ.
ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧ ಹಲವು ಆರೋಪಗಳನ್ನು ಮಾಡಿರುವ ಅವರು, ಕಾಂಗ್ರೆಸ್ನಲ್ಲಿನ ಆಂತರಿಕ ಕಚ್ಚಾಟ, ರೈತರಿಗೆ ಪರಿಹಾರ ನೀಡುವಲ್ಲಿ ವಿಳಂಬ, ಹಿರಿಯ ನಾಗರಿಕರು ಮತ್ತು ವಿಕಲಚೇತನರ ಪಿಂಚಣಿ ಸಮಸ್ಯೆ ಹಾಗೂ ವಿವಿಧ ಇಲಾಖೆಗಳ ಅನುದಾನದ ಕೊರತೆಯನ್ನು ಪ್ರಸ್ತಾಪಿಸಿದ್ದಾರೆ.
ಹಾಲು ಮತ್ತು ಬಸ್ ದರ ಏರಿಕೆ, ರಾಜ್ಯದ ಖಜಾನೆಯ ಸ್ಥಿತಿ ಸೇರಿದಂತೆ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಸರ್ಕಾರದ ಆಡಳಿತವನ್ನು ಟೀಕಿಸಿದ್ದಾರೆ. ಸರ್ಕಾರದ ನಿರ್ಧಾರಗಳಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿದ್ದಾರೆ.
2028ರ ಚುನಾವಣೆಯ ವೇಳೆ ಜನರೇ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವ ಆಪರೇಷನ್ ಮಾಡಲಿದ್ದಾರೆ ಎಂದು ಆರ್. ಅಶೋಕ್ ಎಚ್ಚರಿಕೆ ನೀಡಿದ್ದಾರೆ.










