ವಿಶ್ವವಿದ್ಯಾಲಯದ ಪ್ರಾಧ್ಯಾಪಕರ ಚೇಂಬರ್’ನಲ್ಲೇ ವಾಮಾಚಾರ..!

0
Spread the love

ಧಾರವಾಡ: ಪ್ರಜ್ಞಾವಂತರ ನಗರ ಎನಿಸಿಕೊಂಡಿರುವ ಅದರಲ್ಲೂ ಪ್ರತಿಷ್ಠಿತ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕರ ಚೇಂಬರ್‌ನಲ್ಲೇ ವಾಮಾಚಾರ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ. ಕವಿವಿಯ ಪ್ರಾಚೀನ ಇತಿಹಾಸ ಮತ್ತು ಶಾಸನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ರಮಾ ಗುಂಡೂರಾವ್ ಎಂಬುವವರ ಚೇಂಬರ್‌ನಲ್ಲೇ ಕಿಡಿಗೇಡಿಗಳು ವಾಮಾಚಾರ ಮಾಡಿದ್ದಾರೆ.

Advertisement

ಈ ಘಟನೆಯಿಂದ ಆ ವಿಭಾಗದ ಪ್ರಾಧ್ಯಾಪಕರು ಬೆಚ್ಚಿಬಿದ್ದಿದ್ದಾರೆ. ಡಾ.ರಮಾ ಅವರ ಚೇಂಬರ್‌ನಲ್ಲಿ ಕಪ್ಪು ಬಣ್ಣದ ಮಾಟದ ಗೊಂಬೆ, ಮೂರು ಲಿಂಬೆಹಣ್ಣು ಹಾಗೂ ಅರಿಶಿನ, ಕುಂಕುಮ ಇಡಲಾಗಿದೆ. ಕಿಟಕಿಂದ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ. ಡಾ.ರಮಾ ಅವರು ರಜೆ ಮೇಲೆ ಹೋಗಿದ್ದರು. ಶುಕ್ರವಾರ ಬೆಳಿಗ್ಗೆ ತಮ್ಮ ಚೇಂಬರ್ ತೆಗೆದು ನೋಡಿದಾಗ ಅಲ್ಲಿ ವಾಮಾಚಾರ ನಡೆಸಿದ ಪ್ರಕರಣ ಬೆಳಕಿಗೆ ಬಂದಿದೆ.

ಇದನ್ನು ಕಂಡು ಗಾಬರಿಯಿಂದ ಹೊರ ಬಂದ ರಮಾ ಅವರು ಇದರ ವಿರುದ್ಧ ಕುಲಪತಿಗಳಿಗೆ ದೂರು ನೀಡಿದ್ದಾರೆ. ಅದೇ ವಿಭಾಗದ ಪ್ರಾಧ್ಯಾಪಕರೊಬ್ಬರ ಮೇಲೆ ಅನುಮಾನ ಹುಟ್ಟಿಕೊಂಡಿದ್ದು, ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಆ ಚೇಂಬರ್ ಬಿಟ್ಟುಕೊಡುವ ವಿಚಾರವಾಗಿ ತಿಕ್ಕಾಟ ನಡೆದಿತ್ತು. ಆ ಹಿನ್ನೆಲೆಯಲ್ಲಿ ಈ ಕೃತ್ಯ ಎಸಗಿರಬಹುದು ಎಂದು ಶಂಕೆ ವ್ಯಕ್ತವಾಗಿದೆ.


Spread the love

LEAVE A REPLY

Please enter your comment!
Please enter your name here