ಮಹಿಳೆ ಮನೆಗೆ ನುಗ್ಗಿ ಚಿನ್ನಾಭರಣ ದೋಚಿ ಖದೀಮ ಎಸ್ಕೇಪ್!

0
Spread the love

ಚಾಮರಾಜನಗರ:– ಮಹಿಳೆ ಮನೆಗೆ ನುಗ್ಗಿ ಅಪರಿಚಿತ ವ್ಯಕ್ತಿಯೋರ್ವ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ರಾಮಾಪುರ ಗ್ರಾಮದಲ್ಲಿ ಜರುಗಿದೆ. 55 ವರ್ಷದ ಮಹದೇವಮ್ಮ ಎಂಬುವವರು ಕಾರ್ಯ ನಿಮಿತ್ತ ಮನೆಯಿಂದ ಹೊರಬಂದ ಸಂದರ್ಭದಲ್ಲಿ ಈ ಘಟನೆ ನಡೆದಿದೆ‌.

Advertisement

ಒಂಟಿ ಹೆಣ್ಣಿನ ಸಂಚಾರ ಗಮನಿಸಿದ ಅಪರಿಚಿತನೋರ್ವ, ಆಕೆಯ ಕೈ ಕಾಲುಗಳನ್ನು ಕಟ್ಟಿ, ಬಾಯಿಗೆ ಬಟ್ಟೆ ಬಿಗಿದು ನಂತರ ಕೊರಳಲಿದ್ದ 45 ಗ್ರಾಂ ಚಿನ್ನಾಭರಣ ಕಸಿದು ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆ ನಡೆದ ನಂತರ ಮಹಿಳೆಯ ಚೀರಾಟ ಶಬ್ದ ಕೇಳಿದ ಸ್ಥಳೀಯರು, ಮಹದೇವಮ್ಮ ಅವರನ್ನು ರಕ್ಷಿಸಿದ್ದಾರೆ. ಕೂಡಲೇ ವಿಷಯ ತಿಳಿದ ರಾಮಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಘಟನೆ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದು, ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.


Spread the love

LEAVE A REPLY

Please enter your comment!
Please enter your name here