ತುಮಕೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಜಾರಗೊಳಿಸಿದೆ. ಅಲ್ಲದೇ ಅಧಿಕ ಬಡ್ಡಿ ಪಡೆಯುವುದನ್ನ ತಡೆಯುವ ವಿಧೇಯಕ್ಕೆ ತಿದ್ದುಪಡಿ ತರಲು ತಯಾರಿ ನಡೆಸಿದೆ. ಹೀಗಿದ್ದರೂ ಮೈಕ್ರೋ ಫೈನಾನ್ಸ್ ಸಿಬ್ಬಂದಿಯಿಂದ ಕಿರುಕುಳ ಮುಂದುವರಿದಿದೆ.
ಇದೀಗ ಮೈಕ್ರೋ ಫೈನಾನ್ಸ್ ಗಳ ಕಿರುಕುಳದಿಂದ ಬೇಸತ್ತು ಮಹಿಳೆ ನೇಣಿಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಕೊತ್ತಿಪುರ ಗ್ರಾಮದಲ್ಲಿ ನಡೆದಿದೆ. ಅಜೀಜ್ ಉನ್ನಿಸಾ (50) ಮೃತ ಮಹಿಳೆ,
ಮುತ್ತೂಟ್ ಫೈನಾನ್ಸ್, ಗ್ರಾಮೀಣಕೂಟ, ಐಡಿಎಫ್ ಸಿ, ಬಂಧನ್, ಆರ್ ಬಿಎಲ್, ಆಶೀರ್ವಾದ್, ಧರ್ಮಸ್ಥಳ ಸಂಘ, ಸೂರ್ಯೋದಯ, ಗ್ರಾಮ ಶಕ್ತಿ, ಬಜಾಜ್ ಫೈನಾನ್ಸ್ ಗಳಲ್ಲಿ ಒಟ್ಟು 12 ಲಕ್ಷ ಸಾಲ ಮಾಡಿದ್ದರು ಎನ್ನಲಾಗಿದೆ.
ಕಳೆದ ಎರಡು ತಿಂಗಳಿಂದ ಹಣ ಕಟ್ಟಿರಲಿಲ್ಲ. ಮನೆ ಬಾಗಿಲಿಗೆ ಬಂದು ಹಣ ಕಟ್ಟುವಂತೆ ನಿಂದಿಸುತ್ತಿದ್ದರೆಂದು ಎಂದು ಮೃತಳ ಪುತ್ರ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.