ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ: ಮನೆಯಲ್ಲಿಯೇ ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

0
Spread the love

ಹಾಸನ: ಮೈಕ್ರೋಫೈನ್ಸಾನ್ ಸಿಬ್ಬಂದಿ ಕಿರುಕುಳದಿಂದ ಮನೆಯಲ್ಲಿಯೇ ನೇಣುಬಿಗಿದುಕೊಂಡು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ, ಆಲೂರು ತಾಲ್ಲೂಕಿನ, ಹಳ್ಳಿಯೂರು ಗ್ರಾಮದಲ್ಲಿ ನಡೆದಿದೆ. ಕೆಂಚಮ್ಮ (50) ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದು,

Advertisement

BSS, EIF ಫೈನಾನ್ಸ್ ಕಂಪನಿಯಿಂದ ಎರಡು ಲಕ್ಷ ಸಾಲ ಮಾಡಿದ್ದರು. ಪ್ರತಿ ತಿಂಗಳು ಸರಿಯಾಗಿ ಹಣ ಕಟ್ಟುತ್ತಿದ್ದ ಮಹಿಳೆ ಈ ತಿಂಗಳು ಹಣ ಇಲ್ಲದ ಕಾರಣ ಕಂತು ಕಟ್ಟಿರಲಿಲ್ಲ, ಬಿಎಸ್‌ಎಸ್ ಮೈಕ್ರೋಫೈನಾನ್ಸ್ ಸಿಬ್ಬಂದಿ ಇಂದೇ ಹಣ ಕಟ್ಟುಬೇಕೆಂದು ಮನೆಯ ಬಳಿಯೇ ಕುಳಿತಿದ್ದರು.

ಇದರಿಂದ ಮನನೊಂದು ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾರೆ. ಕೆಂಚಮ್ಮ ಸಾವಿನ ಸುದ್ದಿ ತಿಳಿದು ಮೈಕ್ರೋಫೈನಾನ್ಸ್ ಸಿಬ್ಬಂದಿಗಳು ಎಸ್ಕೇಪ್‌ ಆಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

LEAVE A REPLY

Please enter your comment!
Please enter your name here