ಹಾಸನ: ಹೃದಯಾಘಾತದಿಂದ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ವೆಂಕಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಸಕಲೇಶಪುರ ತಾಲ್ಲೂಕು ವೀರಶೈವ ಸಮಾಜದ ಯುವ ವೇದಿಕೆಯ ಅಧ್ಯಕ್ಷ ಶಶಿಕುಮಾರ್ ಅವರ ಪತ್ನಿ ದೀಪಾ (35) ಹೃದಯಾಘಾತದಿಂದ ಸಾವನ್ನಪ್ಪಿದ ಮಹಿಳೆಯಾಗಿದ್ದು,
Advertisement
ಸ್ನಾನ ಮಾಡುತ್ತಿದ್ದ ವೇಳೆ ತೀವ್ರ ಹೃದಯಾಘಾತದಿಂದ ಕುಸಿದು ಬಿದ್ದಿದ್ದ ದೀಪಾ ಅವರನ್ನು ಪೋಷಕರು ಸಕಲೇಶಪುರ ತಾಲ್ಲೂಕು ಆಸ್ಪತ್ರೆಗೆ ಕರೆದೊಯ್ದರು. ಆದರೆ ಪರಿಶೀಲಿಸಿದ ವೈದ್ಯರು ಅವರು ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ. ಅವರು ಪತಿ ಓರ್ವ ಪುತ್ರನನ್ನು ಅಗಲಿದ್ದು ಅವರ ಪೋಷಕರು ಹಾಗೂ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ.