ಕೋಲ್ಕತ್ತಾ:- ನಗರದ ದಕ್ಷಿಣ ಹೊರವಲಯದಲ್ಲಿರುವ ರೀಜೆಂಟ್ ಪಾರ್ಕ್ ಪ್ರದೇಶದಲ್ಲಿ ಮಹಿಳೆಯೊಬ್ಬಳ ಹುಟ್ಟುಹಬ್ಬದ ದಿನವೇ ಆಕೆಯ ಮೇಲೆ ಇಬ್ಬರು ಪರಿಚಯಸ್ಥರು ಸೇರಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಜರುಗಿದೆ.
ಕೃತ್ಯ ಎಸಗಿ ನಾಪತ್ತೆಯಾಗಿದ್ದ ಇಬ್ಬರು ಆರೋಪಿಗಳನ್ನು ಚಂದನ್ ಮಲಿಕ್ ಮತ್ತು ದೀಪ್ ಎಂದು ಗುರುತಿಸಲಾಗಿದೆ. ದೀಪ್ ಸರ್ಕಾರಿ ಉದ್ಯೋಗಿ ಎಂದು ವರದಿಯಾಗಿದೆ. ಹರಿದೇವ್‌ಪುರದ ಮಹಿಳೆಯನ್ನು ಹುಟ್ಟುಹಬ್ಬದ ಆಚರಣೆ ನೆಪದಲ್ಲಿ ಚಂದನ್, ದೀಪ್ ಮನೆಗೆ ಕರೆದುಕೊಂಡು ಹೋಗಿದ್ದ. ಈ ವೇಳೆ ಹಲ್ಲೆ ನಡೆಸಿ ಆಕೆಯ ಮೇಲೆ ಅತ್ಯಾಚಾರ ಎಸಗಲಾಗಿದೆ.
ಈ ಸಂಬಂಧ ಮಹಿಳೆಯ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದು, ಎಫ್‌ಐಆರ್ ದಾಖಲಾಗಿದೆ. ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.



