• About
  • Advertise
  • Privacy & Policy
  • Contact
Tuesday, November 3, 2026
Vijaya Sakshi News
Advertisement
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
  • Home
  • Gadag News
  • Dharwad
  • Crime News
  • Entertainment
  • Districts
    • Bagalkot
    • Belgaum
    • Bellary
    • Bengaluru City
    • Bengaluru News
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Davanagere
    • Hassan
    • Haveri
    • hubballi
    • Kalaburagi
    • Kodagu
  • E Paper
No Result
View All Result
Vijaya Sakshi News
  • Home
  • Gadag News
  • Karnataka News
  • Crime News
  • Politics News
  • Bengaluru News
  • Entertainment
  • Life Style
  • Sports News
Home Gadag News

ಮಹಿಳೆ ಪ್ರತಿಯೊಬ್ಬರ ಬದುಕಿನ ದಿವ್ಯ ಶಕ್ತಿ

News Desk by News Desk
March 19, 2024
in Gadag News
adhyatma
0
SHARES
0
VIEWS
Share on Facebook

ವಿಜಯಸಾಕ್ಷಿ ಸುದ್ದಿ, ಗದಗ : ಮಹಿಳೆ ಇಂದು ಎಲ್ಲಾ ಕ್ಷೇತ್ರದಲ್ಲಿ ತನ್ನ ಛಾಪನ್ನು ಮೂಡಿಸಿ, ಸ್ತ್ರೀ ಅಬಲೆಯಲ್ಲ ಸಬಲೆ ಎನ್ನುವುದನ್ನು ಸಾಬೀತುಪಡಿಸಿದ್ದಾಳೆ. ಇಂದಿನ ಯುವ ಜನಾಂಗದ, ಒಂದು ಕುಟುಂಬದ, ಸಮಾಜದ ಬಹುದೊಡ್ಡ ಶಕ್ತಿಯಾಗಿ ಮಹಿಳೆಯ ಪಾತ್ರ ಹಿರಿದಾಗಿದೆ. ಮೌಲ್ಯಗಳು ಕುಸಿದು ಹೋಗುತ್ತಿರುವ ಇಂದಿನ ಸಂದರ್ಭದಲ್ಲಿ ಮನೆಯೇ ಮೊದಲ ಪಾಠಶಾಲೆ ತಾಯಿಯೇ ಮೊದಲ ಗುರುವಾಗಿ ಪ್ರತಿಯೊಬ್ಬರ ಬದುಕಿನ ದಿವ್ಯ ಶಕ್ತಿಯಾಗಿ, ಮಕ್ಕಳಿಗೆ ಸಂಸ್ಕಾರವನ್ನು ನೀಡುವಲ್ಲಿ ತಾಯಿಯ ಜವಾಬ್ದಾರಿ ಮುಖ್ಯವಾಗುತ್ತದೆ. ಮಹಿಳಾ ದಿನಾಚರಣೆಯ ಈ ಸಂದರ್ಭದಲ್ಲಿ ಮಹಿಳೆ ತನ್ನನ್ನು ತಾನು ಆತ್ಮವಿಮರ್ಶೆ ಮಾಡಿಕೊಂಡು ತನ್ನ ಪಾತ್ರವನ್ನು ಸರಿಯಾಗಿ ನಿಭಾಯಿಸುವ ದಿಟ್ಟತನ ತೋರಬೇಕು ಎಂದು ಶಿವಶರಣೆ ಡಾ. ನೀಲಮ್ಮತಾಯಿ ಅಸುಂಡಿ ಅಭಿಪ್ರಾಯಪಟ್ಟರು.

ಅವರು ಇಲ್ಲಿನ ಆದಿಶಕ್ತಿ ನಗರದ ಆಧ್ಯಾತ್ಮ ವಿದ್ಯಾಶ್ರಮದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದ ದಿವ್ಯ ಸಾನಿಧ್ಯ ಆಶೀರ್ವಚನ ನೀಡಿದರು.

ಉಪನ್ಯಾಸ ನೀಡಿದ ಎಫ್.ಎಂ. ಡಬಾಲಿ ಪಿಯು ಕಾಲೇಜಿನ ಉಪನ್ಯಾಸಕಿ ಸುಧಾ ಹುಚ್ಚಣ್ಣವರ ಮಾತನಾಡಿ, ಮಹಿಳೆ ಇಂದು ಬಹು ಆಯಾಮಗಳಲ್ಲಿ ತನ್ನನ್ನು ತಾನು ಗುರುತಿಸಿಕೊಂಡಿದ್ದಾಳೆ. ಜೊತೆಗೆ ಮನೆ ಬೆಳಗುವ ನಂದಾದೀಪವಾಗಿ, ಸಮಾಜದ ಅಂಕುಡೊಂಕುಗಳನ್ನು ತಿದ್ದಿ ತೀಡುವ ಮಹಾ ಶಿಕ್ಷಕಿಯಾಗಿ, ಬದುಕಿಗೆ ಮಾರ್ಗ ತೋರುವ ಮಾರ್ಗದರ್ಶಿಯಾಗಿದ್ದಾಳೆ ಎನ್ನುವುದು ಎಷ್ಟು ಸತ್ಯವೋ, ಅಷ್ಟೇ ದೌರ್ಜನ್ಯಗಳು ಇಂದಿಗೂ ಮಹಿಳೆಯ ಮೇಲೆ ಆಗುತ್ತಿರುವುದು ಬೂದಿ ಮುಚ್ಚಿದ ಕೆಂಡದಂತೆ ಮುಂದುವರಿಯುತ್ತಲೇ ಸಾಗಿದೆ.

ಕೆಲವು ನಕಾರಾತ್ಮಕ ಮನಸ್ಥಿತಿಗಳು ಮಹಿಳೆಯನ್ನು ಎಲ್ಲೋ ಒಂದು ಕಡೆ ಕುಗ್ಗಿಸುವ ಕುತಂತ್ರವನ್ನು ಸಹ ನಡೆಸಿರುವುದು ಇಂದಿನ ಸಮಾಜಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಇದೆಲ್ಲವನ್ನರಿತು ಇಂದಿನ ಎಲ್ಲಾ ಮಹಿಳಾ ಸಮುದಾಯ ಮನೋಧೈರ್ಯದಿಂದ, ಪ್ರಜ್ಞಾವಂತಿಕೆಯ ದಿಟ್ಟತನದಿಂದ ಮುಂದುವರಿಯುವುದು ಎಲ್ಲ ಮಹಿಳೆಯರಿಗೆ ಇಂದು ಅತ್ಯವಶ್ಯಕವಾಗಿದೆ ಎಂದರು.

ಉದ್ಘಾಟಕರಾಗಿ ಆಗಮಿಸಿದ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ. ನಡುವಿನಮನಿ ಮಾತನಾಡಿ, ಮಹಿಳಾ ದಿನದ ಈ ಸಂದರ್ಭದಲ್ಲಿ ಪ್ರತಿಯೊಬ್ಬ ಮಹಿಳೆಯನ್ನು ಗೌರವಿಸುವುದು ಸುಸಂಸ್ಕೃತ ಸಮಾಜದ ಲಕ್ಷಣವಾಗಿದೆ. ಪ್ರತಿಯೊಬ್ಬ ಯಶಸ್ವಿ ಪುರುಷನ ಹಿಂದೆ ಒಬ್ಬ ಮಹಿಳೆ ಇರುತ್ತಾಳೆ ಎನ್ನುವುದನ್ನು ಸದಾ ನಾವು ಗಮನಿಸಬೇಕು ಎಂದರು.

ಆಶ್ರಮದ ಸಾಧಕಿ ಶರಣೆ ಮೈತ್ರಾದೇವಿ ಅಮ್ಮನವರು ಮಾತನಾಡುತ್ತಾ, ಇಂದು ಶಿಕ್ಷಣದಲ್ಲಿ ಮಕ್ಕಳಿಗೆ ನೀತಿ ಕಥೆಗಳನ್ನು ಬೋಧನೆ ಮಾಡುವ ಮೂಲಕ ಪಠ್ಯದ ಜೊತೆಗೆ ನೈತಿಕ ಮೌಲ್ಯಗಳನ್ನು ಸಹ ಬೆಳೆಸುವುದು ಅವಶ್ಯವಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ಪ್ರಾಥಮಿಕ ಶಿಕ್ಷಕರ ಸಂಘದ ಗ್ರಾಮೀಣ ವಿಭಾಗದ ಅಧ್ಯಕ್ಷ ಎಸ್.ಆರ್. ಬಂಡಿ, ಕಾರ್ಯದರ್ಶಿ ಕೆ.ಬಿ. ಕೊಣ್ಣೂರ್ ಆಗಮಿಸಿದ್ದರು. ರಾಷ್ಟçಪ್ರಶಸ್ತಿ ವಿಜೇತ ನಿವೃತ್ತ ಶಿಕ್ಷಕಿ ಶಾರದಾ ಕಾತರಕಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘಟನಾ ಕಾರ್ಯದರ್ಶಿ ಬಿ.ಬಿ. ಹರ್ತಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿಯರ ಬಳಗದಿಂದ ವಚನ ನೃತ್ಯ ಕಾರ್ಯಕ್ರಮ ನೆರವೇರಿತು.

ಶೋಭಾ ಪಾಟೀಲ್ ಸ್ವಾಗತಿಸಿದರು. ಶೈಲಜಾ ಗುಂಜಳ್ ವಂದಿಸಿದರು. ಕಾರ್ಯಕ್ರಮದಲ್ಲಿ ಸಾಧಕ ಶಿಕ್ಷಕಿಯರನ್ನು ಸನ್ಮಾನಿಸಲಾಯಿತು. ಎನ್.ಎಚ್. ಪಾಟೀಲ್, ಎಸ್.ಎಸ್. ಲಕ್ಷಕೊಪ್ಪ, ಪಿ.ಬಿ. ಮುಧೋಳ್‌ಮಠ, ಎಂ.ಬಿ. ಪರ್ವತಗೌಡ, ವಸಂತ್ ಕಲಕಂಬಿ, ಜಿ.ಎಸ್. ಗೌಡರ್, ಎಸ್.ಜಿ. ಗೌಡ, ಶಿಲ್ಪಾ ಗುಡಗೇರಿ, ಎನ್.ಆರ್. ಹೂಗಾರ್ ಹಾಗೂ ತಾಲೂಕಿನ ಎಲ್ಲ ಶಿಕ್ಷಕರು, ಅಧ್ಯಾತ್ಮ ವಿದ್ಯಾಶ್ರಮದ ಆದಿಶಕ್ತಿ ಬಳಗದ ಸರ್ವ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ವಿ.ಎಂ. ಹಿರೇಮಠ ಮಾತನಾಡಿ, ಒಬ್ಬ ಮಗಳಾಗಿ, ಸಹೋದರಿಯಾಗಿ, ಹೆಂಡತಿಯಾಗಿ, ತಾಯಿಯಾಗಿ, ಶಿಕ್ಷಕಿಯಾಗಿ ಹೀಗೆ ಹಲವು ಪಾತ್ರಗಳನ್ನು ನಿಭಾಯಿಸುವ ಸ್ತ್ರೀ ಪ್ರತಿಯೊಬ್ಬರ ಬದುಕಿನಲ್ಲಿ ಸ್ಪೂರ್ತಿದಾಯಕಿಯಾಗಿದ್ದಾಳೆ. ಮಹಿಳಾ ಸಮಾನತೆಯನ್ನು ಕಾಯ್ದುಕೊಂಡು ಹೋಗುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು.

Tags: Adhyatma Vidyashram of Adishakti NagarDivine Presence BlessingF.M. Dabali PU CollegeShivsharan Dr. Neelammatai AsundiSudha HuchchannavaraWomen's Day
ShareSendShare
Previous Post

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್‌ಸಾಬ ಬಬರ್ಚಿಗೆ ಸನ್ಮಾನ

Next Post

ಅಭಿವೃದ್ಧಿಯ ಹೊಸ ಮನ್ವಂತರಕ್ಕಾಗಿ ಆಶೀರ್ವದಿಸಿ

News Desk

News Desk

Next Post
gajendragada

ಅಭಿವೃದ್ಧಿಯ ಹೊಸ ಮನ್ವಂತರಕ್ಕಾಗಿ ಆಶೀರ್ವದಿಸಿ

Stay Connected test

  • 24k Followers
  • 99 Subscribers
  • Trending
  • Comments
  • Latest

ಪೊಲೀಸ್ ವೇಷದಲ್ಲಿ ಅಮಾಯಕರಿಗೆ ಬೆದರಿಕೆ: ಸಂಜಯ ಕೊಪ್ಪದ ಬಂಧನಕ್ಕೆ ಸರ್ಕಾರದ ಮುದ್ರೆ

October 24, 2026
ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

ಧಾರಾಕಾರ ಮಳೆಗೆ ತತ್ತರಿಸಿದ ಗದಗ: ಸಿಡಿಲು ಬಡಿದು ಕುರಿಗಾಯಿ ಸಾವು, 5 ಆಡುಗಳು ಬಲಿ

October 23, 2026
Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

Crime News: ಅರಣ್ಯ ಇಲಾಖೆ ನೌಕರ ವಿಠಲ್ ಜೋನಿ ಆತ್ಮಹತ್ಯೆ: ಕಾರಣ ನಿಗೂಢ

October 25, 2026
ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

ಗದಗದಲ್ಲಿ ಜೆಸಿಬಿ ಘರ್ಜನೆ: ಹೆದ್ದಾರಿ ಪಕ್ಕದಲ್ಲಿ ನಿರ್ಮಿಸಿದ್ದ ಬಡವರ ಅಂಗಡಿಗಳು ನೆಲಸಮ, ಅಪಘಾತಗಳ ಆತಂಕಕ್ಕೆ ಬ್ರೇಕ್‌!

October 23, 2026
Single Post Template – Fast News

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

0
Single Post Template – Fast News

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

0
Single Post Template – Fast News

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

0
Single Post Template – Fast News

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?
ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

0
ನಕಲಿ ಔಷಧ ದಂಧೆಗೆ ಇ.ಡಿ ಬಿಗ್ ಶಾಕ್: ಕೃಪಾ ಹೆಲ್ತ್ ಕೇರ್‌ನ ವೀರೇಶ್ ಕುಮಾರ್ ಬ್ಯಾಂಕ್ ಖಾತೆಯಲ್ಲಿದ್ದ ₹9 ಲಕ್ಷ ಫ್ರೀಜ್!

ನಕಲಿ ಔಷಧ ದಂಧೆಗೆ ಇ.ಡಿ ಬಿಗ್ ಶಾಕ್: ಕೃಪಾ ಹೆಲ್ತ್ ಕೇರ್‌ನ ವೀರೇಶ್ ಕುಮಾರ್ ಬ್ಯಾಂಕ್ ಖಾತೆಯಲ್ಲಿದ್ದ ₹9 ಲಕ್ಷ ಫ್ರೀಜ್!

November 3, 2026
ಸ್ಟಿಂಗ್ ಆಪರೇಷನ್ ಪ್ರಕರಣ: ಸಿಸಿಬಿ ವಿಚಾರಣೆಗೆ ಹಾಜರಾದ HDK ಪಿಆರ್‌ಒ ಪ್ರಜ್ವಲ್ ಪ್ರಸಾದ್!

ಸ್ಟಿಂಗ್ ಆಪರೇಷನ್ ಪ್ರಕರಣ: ಸಿಸಿಬಿ ವಿಚಾರಣೆಗೆ ಹಾಜರಾದ HDK ಪಿಆರ್‌ಒ ಪ್ರಜ್ವಲ್ ಪ್ರಸಾದ್!

November 3, 2026
ಮದುವೆ ನಿರಾಕರಣೆಗೇ ಜೀವಭಯ: ತಂದೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಯುವತಿ

ಹೊರರಾಜ್ಯ ಪೊಲೀಸರಿಗೆ ಹೈಕೋರ್ಟ್ ಬಿಗ್ ಶಾಕ್! ಕರ್ನಾಟಕಕ್ಕೆ ತನಿಖೆಗೆ ಬರುವ ಮುನ್ನ ಈ ನಿಯಮ ಪಾಲಿಸುವುದು ಕಡ್ಡಾಯ

November 3, 2026
ಹಾಸನಾಂಬ ದರ್ಶನಕ್ಕೆ ಬಂದ ಮಹಿಳೆಯ 3 ಲಕ್ಷ ರೂ. ಚಿನ್ನದ ಬಳೆ ನಾಪತ್ತೆ! ಮರಳಿಸಿ ಪ್ರಾಮಾಣಿಕತೆ ಮೆರೆದ ಸಿಬ್ಬಂದಿ

ಹಾಸನಾಂಬ ದರ್ಶನಕ್ಕೆ ಬಂದ ಮಹಿಳೆಯ 3 ಲಕ್ಷ ರೂ. ಚಿನ್ನದ ಬಳೆ ನಾಪತ್ತೆ! ಮರಳಿಸಿ ಪ್ರಾಮಾಣಿಕತೆ ಮೆರೆದ ಸಿಬ್ಬಂದಿ

November 3, 2026

Recent News

We bring you the best Premium WordPress Themes that perfect for news, magazine, personal blog, etc. Check our landing page for details.

Browse by Category

Recent News

ನಕಲಿ ಔಷಧ ದಂಧೆಗೆ ಇ.ಡಿ ಬಿಗ್ ಶಾಕ್: ಕೃಪಾ ಹೆಲ್ತ್ ಕೇರ್‌ನ ವೀರೇಶ್ ಕುಮಾರ್ ಬ್ಯಾಂಕ್ ಖಾತೆಯಲ್ಲಿದ್ದ ₹9 ಲಕ್ಷ ಫ್ರೀಜ್!

ನಕಲಿ ಔಷಧ ದಂಧೆಗೆ ಇ.ಡಿ ಬಿಗ್ ಶಾಕ್: ಕೃಪಾ ಹೆಲ್ತ್ ಕೇರ್‌ನ ವೀರೇಶ್ ಕುಮಾರ್ ಬ್ಯಾಂಕ್ ಖಾತೆಯಲ್ಲಿದ್ದ ₹9 ಲಕ್ಷ ಫ್ರೀಜ್!

November 3, 2026
ಸ್ಟಿಂಗ್ ಆಪರೇಷನ್ ಪ್ರಕರಣ: ಸಿಸಿಬಿ ವಿಚಾರಣೆಗೆ ಹಾಜರಾದ HDK ಪಿಆರ್‌ಒ ಪ್ರಜ್ವಲ್ ಪ್ರಸಾದ್!

ಸ್ಟಿಂಗ್ ಆಪರೇಷನ್ ಪ್ರಕರಣ: ಸಿಸಿಬಿ ವಿಚಾರಣೆಗೆ ಹಾಜರಾದ HDK ಪಿಆರ್‌ಒ ಪ್ರಜ್ವಲ್ ಪ್ರಸಾದ್!

November 3, 2026
  • About
  • Advertise
  • Privacy & Policy
  • Contact

Vijaya Sakshi 2026 CREATED BY Kalahamsa Infotech. PREMIUM WEBSITE SOLUTIONS.

error: Content is protected !!
Join WhatsApp ▤ Read E-Paper