ಮಹಿಳೆ ಕಿಡ್ನ್ಯಾಪ್ ಕೇಸ್: ಭವಾನಿ ರೇವಣ್ಣಗೆ ಬಿಗ್ ರಿಲೀಫ್ ಕೊಟ್ಟ ಸುಪ್ರೀಂ!

0
Spread the love

ನವದೆಹಲಿ:- ಅತ್ಯಾಚಾರಕ್ಕೊಳಗಾದ ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರೇವಣ್ಣ ಪತ್ನಿ ಭವಾನಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ಕೊಟ್ಟಿದೆ.

Advertisement

ಅಪಹರಣ ಪ್ರಕರಣದಲ್ಲಿ ಜೆಡಿಎಸ್ ನಾಯಕ ಹೆಚ್​ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ಕರ್ನಾಟಕ ಹೈಕೋರ್ಟ್​ ನೀಡಿರುವ ಜಾಮೀನನ್ನು ರದ್ದುಗೊಳಿಸಲಾಗದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಹೀಗಾಗಿ ಭವಾನಿ ನಿರಾಳರಾಗುವಂತೆ ಮಾಡಿದೆ.

ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಪೀಠ, ಪ್ರಕರಣದಲ್ಲಿ ಈಗಾಗಲೇ ಚಾರ್ಜ್​ಶೀಟ್ ಸಲ್ಲಿಕೆ ಮಾಡಲಾಗಿದೆ. ರಾಜಕೀಯ ಕುಟುಂಬ ಎಂದು ಜಾಮೀನು ನಿರಾಕರಿಸಲು ಸಾಧ್ಯವಿಲ್ಲ. ಕೆಲ ರಾಜಕಾರಣಿಗಳು ಅಧಿಕಾರ ದುರ್ಬಳಕೆ ಮಾಡಿಕೊಳ್ಳಬಹುದು.

ಈ ಪ್ರಕರಣದಲ್ಲಿ ತನಿಖೆ ದಾರಿ ತಪ್ಪಿದೆಯಾ? ತಪ್ಪಿದ್ದರೆ ನಾವು ನಿಮ್ಮ ನೆರವಿಗೆ ಬರಬಹುದು. ಆದರೆ ಇಲ್ಲಿ ಯಾವುದೂ ಆ ರೀತಿ ಕಾಣುತ್ತಿಲ್ಲ ಎಂದು ಹೇಳಿದೆ.

ಸುಪ್ರೀಂ ತೀರ್ಪಿನಿಂದ ಭವಾನಿ ರೇವಣ್ಣ ರಿಲ್ಯಾಕ್ಸ್ ಆಗಿದ್ದಾರೆ.


Spread the love

LEAVE A REPLY

Please enter your comment!
Please enter your name here