HomeKarnataka Newsಪತಿ ಬಿಟ್ಟು 'ಇನ್‌ಸ್ಟಾ' ಲವರ್ ಜೊತೆ ಎರಡನೇ ಮದುವೆಯಾದ ಹೆಂಡ್ತಿ!

ಪತಿ ಬಿಟ್ಟು ‘ಇನ್‌ಸ್ಟಾ’ ಲವರ್ ಜೊತೆ ಎರಡನೇ ಮದುವೆಯಾದ ಹೆಂಡ್ತಿ!

For Dai;y Updates Join Our whatsapp Group

Spread the love

ನೆಲಮಂಗಲ:– ಮಹಿಳೆ ಓರ್ವಳು 13 ವರ್ಷದಿಂದ ಸಂಸಾರ ಮಾಡಿದ್ದ ಗಂಡನನ್ನು ಬಿಟ್ಟು ನಿನ್ನೆ, ಮೊನ್ನೆ ಪರಿಚಯವಾದ ಇನ್‌ಸ್ಟಾ ಗೆಳೆಯನ ಜೊತೆ ಓಡಿ ಹೋಗಿ ಎರಡನೇ ಮದುವೆ ಆಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಜರುಗಿದೆ.

ನೇತ್ರಾವತಿ ಎಂಬ ಮಹಿಳೆಯು ರಮೇಶ್ ಎಂಬುವವರ ಜೊತೆ ಕಳೆದ 13 ವರ್ಷಗಳ ಹಿಂದೆ ಮದುವೆ ಆಗಿದ್ದರು. ಈ ಮುದ್ದಾದ ಸಂಸಾರಕ್ಕೆ ಒಂದು ಮಗು ಕೂಡ ಇತ್ತು.

ಆದರೆ ಮಹಿಳೆಗೆ ಕಳೆದ 1 ವಾರದ ಹಿಂದೆ ಇನ್‌ಸ್ಟಾದಲ್ಲಿ ಸಂತೋಷ್ ಎಂಬಾತನ ಪರಿಚಯವಾಗಿತ್ತು. ಈ ಪರಿಚಯವು ಪ್ರೀತಿಗೆ ತಿರುಗಿತ್ತು. ನೇತ್ರಾವತಿಯು ಕೆಲವೇ ದಿನಗಳ ಪ್ರೀತಿಗಾಗಿ ಮೊದಲ ಪತಿಗೆ ಕೈಕೊಟ್ಟು, ಸಂತೋಷ್ ಜೊತೆ ದೇವಾಲಯಲ್ಲಿ ಎರಡನೇ ಮದುವೆಯಾಗಿದ್ದಾಳೆ. ಸಾಮಾಜಿಕ ಜಾಲತಾಣದಲ್ಲಿ ಈ ಮದುವೆಯ ವೀಡಿಯೋವನ್ನು ನೋಡಿ ಮೊದಲ ಪತಿ ಶಾಕ್ ಆಗಿದ್ದಾರೆ.

ಪೊಲೀಸರ ಭದ್ರತೆಯಲ್ಲಿ ಬಟ್ಟೆ ಹಾಗೂ ಇನ್ನಿತರ ವಸ್ತುಗಳನ್ನ ತೆಗೆದುಕೊಂಡು ಹೋಗಲು ಮನೆ ಬಳಿ ಬಂದ ನೇತ್ರಾವತಿಗೆ ಸ್ಥಳೀಯರು ಕ್ಲಾಸ್ ತೆಗೆದುಕೊಂಡಿದ್ದಾರೆ. ನೇತ್ರಾವತಿ ವಿರುದ್ಧ ನೆಲಮಂಗಲ ಟೌನ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತಿ ಹಾಗೂ ಆತನ ಕುಟುಂಬ ದೂರು ನೀಡಿ ಆಕ್ರೋಶ ಹೊರಹಾಕಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!