ಮಹಿಳೆ ಕೊಲೆ ಮಾಡಿ ಅಂಗಾಂಗ ಕತ್ತರಿಸಿ ಎಸೆದ ಪ್ರಕರಣ: ಅಳಿಯ ಸೇರಿ ನಾಲ್ವರು ಅರೆಸ್ಟ್!

0
Spread the love

ತುಮಕೂರು:– ಮಹಿಳೆ ಕೊಲೆ ಮಾಡಿ ದೇಹದ ಅಂಗಾಂಗಳನ್ನು ಬಿಸಾಡಿ ಎಸ್ಕೇಪ್ ಆಗಿದ್ದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Advertisement

42 ವರ್ಷದ ಲಕ್ಷ್ಮಿದೇವಮ್ಮ ಕೊಲೆಯಾದ ಮಹಿಳೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಳಿಯ ಡಾ.ರಾಮಚಂದ್ರ ಸೇರಿ ನಾಲ್ವರನ್ನು ಅರೆಸ್ಟ್ ಮಾಡಲಾಗಿದೆ. ಲಕ್ಷ್ಮಿದೇವಮ್ಮ ಮಗಳನ್ನು ಅನೈತಿಕ ಚಟುವಟಿಕೆಗಳಿಗೆ ಬಳಸಿಕೊಳ್ಳಲು ಒತ್ತಾಯಿಸುತ್ತಿದ್ದರು. ರಾಮಚಂದ್ರ ಇದರಿಂದ ಬೇಸತ್ತು ಹತ್ಯೆಗೆ ಸಂಚು ರೂಪಿಸಿದ್ದರು’ ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

ಆ. 3ರಂದು ಲಕ್ಷ್ಮಿದೇವಮ್ಮ ಮಗಳನ್ನು ನೋಡಿ ಬರಲು ಮನೆಯಿಂದ ಹೋಗಿದ್ದರು. ಆ. 7ರಂದು ತಾಲ್ಲೂಕಿನ ಹೊಳವನಹಳ್ಳಿ ಹೋಬಳಿ ಚಿಂಪುಗಾನಹಳ್ಳಿ, ಕೋಳಾಲ ಹೋಬಳಿ ವ್ಯಾಪ್ತಿಯ ಮಧ್ಯವೆಂಕಟಾಪುರ ಹಾಗೂ ಚನ್ನರಾಯನದುರ್ಗಾ ಹೋಬಳಿ ವ್ಯಾಪ್ತಿಯ ಬೆಂಡೋಣೆ ಗ್ರಾಮದ ಬಳಿ ದೇಹದ ಕೆಲ ಅಂಗಾಂಗಗಳು ಪತ್ತೆಯಾಗಿದ್ದವು. ಅದೇ ದಿನ ರಾತ್ರಿ ಸಿದ್ಧರಬೆಟ್ಟದ ಸಮೀಪದಲ್ಲಿ ಕೊಳೆತ ಸ್ಥಿತಿಯಲ್ಲಿ ತಲೆ ಹಾಗೂ ಉಡುಪು ಸಿಕ್ಕಿತ್ತು.

ಲಕ್ಷ್ಮಿದೇವಮ್ಮ ಕಾಣೆಯಾದ ಬಗ್ಗೆ ಬೆಳ್ಳಾವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅವರ ಕುಟುಂಬಸ್ಥರನ್ನು ಕರೆದು ವಿಚಾರಿಸಿದ್ದು, ಕೈ ಮೇಲಿನ ಅಚ್ಚೆ, ಮುಖದ ಮೇಲಿನ ಕೆಲವು ಗುರುತು, ಉಡುಪುಗಳ ಆಧಾರದ ಮೇಲೆ ಕೊಲೆಯಾಗಿರುವುದು ಲಕ್ಷ್ಮಿದೇವಮ್ಮ ಎಂಬುವುದು ದೃಢಪಟ್ಟಿತ್ತು. 18 ಕಡೆಗಳಲ್ಲಿ ಅಂಗಾಂಗ ಎಸೆದಿದ್ದರಿಂದ ಆರೋಪಿಗಳ ಪತ್ತೆ ಸವಾಲಾಗಿತ್ತು. ಪ್ರಕರಣದ ತನಿಖೆಗೆ 8 ತಂಡಗಳನ್ನು ನಿಯೋಜಿಸಲಾಗಿತ್ತು.

ಪ್ರಕರಣ ಭೇದಿಸಿರುವ ಪೊಲೀಸರು ಇದೀಗ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.


Spread the love

LEAVE A REPLY

Please enter your comment!
Please enter your name here