ಪುಷ್ಪ 2 ಚಿತ್ರದ ಪ್ರದರ್ಶನ ವೇಳೆ ಹೈದರಾಬಾದ್ನ ಸಂಧ್ಯಾ ಥಿಯೇಟರ್ನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ನಿವಾಸದ ಎದುರು ಬಾರಿ ಹೈಡ್ರಾಮಾ ನಡೆದಿದೆ. ಕೆಲವು ಅಪರಿಚಿತ ವ್ಯಕ್ತಿಗಳು ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದು ಮೃತ ಮಹಿಳೆ ಕುಟುಂಬಕ್ಕೆ 1 ಕೋಟಿ ರೂ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಪುಷ್ಪ 2 ಸಿನಿಮಾದ ಪ್ರೀಮಿಯರ್ ವೇಳೆ ಸಂಧ್ಯಾ ಚಿತ್ರಮಂದಿರದಲ್ಲಿ ಉಂಟಾದ ಕಾಲ್ತುಳಿತ ಅಭಿಮಾನಿಯೊಬ್ಬರು ಮೃತರಾದ ಘಟನೆ ಸಂಬಂಧಿಸಿದಂತೆ ಇತ್ತೀಚೆಗೆ ಅಲ್ಲು ಅರ್ಜುನ್ ಅವರನ್ನು ಬಂಧಿಸಿ ಬಳಿಕ ಬಿಡುಗಡೆ ಮಾಡಲಾಗಿತ್ತು. ಇದೀಗ ಮೃತರ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ಮಾಡಲಾಗಿದ್ದು, ಈ ವೇಳೆ ಅಲ್ಲು ಅರ್ಜುನ್ ಅವರ ಮನೆಯ ಮೇಲೆ ಕಲ್ಲು ತೂರಾಟ ನಡೆದಿದೆ.
ಓಯು ಜಎಸಿ ಸಂಘಟನೆಯ ಸದಸ್ಯರು ಜ್ಯುಬಿಲಿ ಹಿಲ್ಸ್ನಲ್ಲಿ ಇರುವ ಅಲ್ಲು ಅರ್ಜುನ್ ನಿವಾಸದ ಎದುರು ಪ್ರತಿಭಟನೆ ಮಾಡಲು ಬಂದಿದ್ದಾರೆ. ಈ ವೇಳೆ ಪ್ರತಿಭಟನಾಕಾರರನ್ನು ಭದ್ರತಾ ಸಿಬ್ಬಂದಿ ತಡೆದಿದ್ದಾರೆ. ಇದರಿಂದ ಇನ್ನಷ್ಟು ರೊಚ್ಚಿಗೆದ್ದ ಪ್ರತಿಭಟನಾಕಾರರು ಅಲ್ಲು ಅರ್ಜುನ್ ಅವರ ಮನೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ವರದಿ ಆಗಿದೆ. ಮನೆಯ ಭದ್ರತಾ ಸಿಬ್ಬಂದಿ ಮೇಲೂ ಹಲ್ಲೆ ಮಾಡಲಾಗಿದೆ ಎನ್ನಲಾಗಿದೆ.