ಮಂಗಳೂರು: ದೂರು ನೀಡಲು ಬಂದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ ಅನೇಕ ಆರೋಪಗಳು ಕೇಳಿಬರುತ್ತಿವೆ.
ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತನಿಖೆಗೆ ಆದೇಶಿಸಿದ್ದು, ಯಾವುದೇ ಸಂತ್ರಸ್ತೆಯರು ಧೈರ್ಯದಿಂದ ದೂರು ನೀಡುವಂತೆ ಮನವಿ ಮಾಡಿದ್ದಾರೆ. ಆರೋಪಿ ಸಂದೇಶ್ ಹಲವಾರು ಮಹಿಳೆಯರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾನೆ ಎನ್ನಲಾಗಿದ್ದು, ತಡರಾತ್ರಿ ಮಹಿಳೆಯೊಬ್ಬರ ಮನೆ ಕಾಂಪೌಂಡ್ ಹಾರುತ್ತಿರುವ ದೃಶ್ಯವು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಈ ವಿಡಿಯೋ ವೈರಲ್ ಅದ ಬೆನ್ನಲ್ಲೇ ಎಚ್ಚೆತ್ತ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.



